ಚಿಕ್ಕಮಗಳೂರು: ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅದ್ಯಕ್ಷ ಸಂತೋಷ್ ಕೋಟ್ಯಾನ್ ಹಾಗೂ ಬಜರಂಗದಳದ ಶ್ಯಾಮ್ ವಿರುದ್ಧ ಜಾರಿಗೊಳಿಸಲಾಗಿದ್ದ ಗಡಿಪಾರು ನೋಟಿಸ್ಗೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ಪ್ರಕರಣವು ಇತ್ತೀಚಿಗೆ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ಸಂತೋಷ್ ಕೋಟ್ಯಾನ್ ಹಾಗೂ ಶ್ಯಾಮ್ ವಿರುದ್ಧ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂಬ ಕಾರಣ ನೀಡಿ ಚಿಕ್ಕಮಗಳೂರು ಜಿಲ್ಲಾಡಳಿತ ಗಡಿಪಾರು ನೋಟಿಸ್ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ವಕೀಲರ ತಂಡ ನ್ಯಾಯಾಲಯದ ಮೊರೆ ಹೋಗಿದ್ದರು.
ಅರ್ಜಿಯ ವಿಚಾರಣೆ ವೇಳೆ ವಾದಗಳನ್ನು ಆಲಿಸಿದ ನ್ಯಾಯಾಲಯ ತಾತ್ಕಾಲಿಕವಾಗಿ ಗಡಿಪಾರು ನೋಟಿಸ್ ಜಾರಿಗೆ ತಡೆ ನೀಡಿದ್ದು, ಅಂತಿಮ ತೀರ್ಪು ಬರುವವರೆಗೆ ಈ ತಡೆಯಾಜ್ಞೆ ಮುಂದುವರಿಯಲಿದೆ ಎಂದು ನ್ಯಾಯಾಲಯ ತಿಳಿಸಿದೆ..
