ಶೃಂಗೇರಿ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿದರು. ಈ ವೇಳೆ ಶೃಂಗೇರಿ ಕ್ಷೇತ್ರದ ಸುಮಾರು 300ಕ್ಕೂ ಅಧಿಕ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿದ್ದರು.

ಹೌದು .. ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ನಡೆದ ಡಾ.ಶ್ರೀ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಶ್ರೀ ಗುರು ಭೈರವೈಕ್ಯ ಮಂದಿರದ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಶೃಂಗೇರಿ ಕ್ಷೇತ್ರದ ರೈತ ಒಕ್ಕೂಟ ಹಾಗೂ ಬಿಜೆಪಿ ಕಾರ್ಯಕರ್ತರಾದ ವಿಶ್ವನಾಥ್ ಗದ್ದೆಮನೆ ನೇತೃತ್ವದಲ್ಲಿ 300ಕ್ಕೂ ಅಧಿಕ ಕಾರ್ಯಕರ್ತರು ಹಾಗೂ ಮುಖಂಡರು ನೆರವೇರಿದ್ದರು.
ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರು “ಭೈರವೈಕ್ಯ ಮಂದಿವನ್ನು ಲೋಕಾರ್ಪಣೆಗೊಳಿಸಿ” ನಂತರ “ಸೌಂದರ್ಯಲಹರಿ ಮತ್ತು ಶಿವಮಹಿಮ್ನಃ ಸ್ತೋತ್ರಮ್” ಪುಸ್ತಕ ಬಿಡುಗಡೆಗೊಳಿಸಿದರು.

ಈ ಕಾರ್ಯಕ್ರಮದಲ್ಲಿ ರಾಮಸ್ವಾಮಿ ಶೆಟ್ಟಿಗದ್ದೆ, ಸತೀಶ್ ಅಡ್ಡದ, ಅನೂಪ್ ನಾರ್ವೆ, ಪ್ರದೀಪ್ ಕಿಚ್ಚೆಬ್ಬಿ.
ಕಾರ್ಬೈಲ್ ಮಂಜುನಾಥ್ ಗೌಡ ಸೇರಿದಂತೆ ಹಲವರು ಶೃಂಗೇರಿ ಕ್ಷೇತ್ರದ ಕಾರ್ಯಕರ್ತರು ಹಾಜರಿದ್ದರು.
