ಹಾಸನ: ಸಿಡಿಲು ಬಡಿದು ಮಹಿಳೆ ಸಾವಿಗೀಡಾದ ಘಟನೆ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ.
ನೀಲಮ್ಮ (70) ಸಾವನ್ನಪ್ಪಿದವರು. ಜಾನುವಾರು ಮೇಯಿಸಲು ಹೋಗಿದ್ದ ನೀಲಮ್ಮ, ಮಳೆಯಿಂದ ರಕ್ಷಣೆ ಪಡೆಯಲು ಮರದ ಬಳಿ ಆಶ್ರಯ ಪಡೆದಿದ್ದರು. ಆಗ ಸಿಡಿಲು ಬಡಿದಿದೆ ಎಂದು ತಿಳಿದು ಬಂದಿದೆ.

ಭಾರಿ ಮಳೆ ಮತ್ತು ಬಿರುಗಾಳಿಗೆ ಚನ್ನರಾಯಪಟ್ಟಣ ತಾಲೂಕಿನ ನುಗ್ಗೆಹಳ್ಳಿ ಹೋಬಳಿಯ ಕಾರೆಹಳ್ಳಿ, ನಾಗರನವಿಲೆ, ಚಿಕ್ಕೋನಹಳ್ಳಿ, ರೇಚಿಹಳ್ಳಿ ರಸ್ತೆಯುದ್ಧಕ್ಕೂ ಸುಮಾರು ಇಪ್ಪತ್ತಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ.
ಬೆಳಗ್ಗೆಯಿಂದ ಸಂಜೆತನಕ ಚೆಸ್ಕಾಂ ಸಿಬ್ಬಂದಿ ಮರ ತೆರವು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಚೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
