ಜಯಪುರ :ಪಟ್ಟಣದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾರ್ಯಕೈಗೊಳ್ಳಲಾಗಿದ್ದು ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆಯಿಂದ ಸಂಜೆ ತನಕ ವಿದ್ಯುತ್ ವ್ಯತ್ಯಯವಾಗಲಿದೆ.

ಹೌದು .. ಆದ್ದರಿಂದ, ದಿನಾಂಕ 23 ಏಪ್ರಿಲ್ 2026 ರಂದು ಬೆಳಗ್ಗೆ 9:00 ಗಂಟೆಯಿಂದ ಸಂಜೆ 5:30 ಗಂಟೆಯವರೆಗೆ ಜಯಪುರ ಪಟ್ಟಣದ ಕೆಲವು ಪ್ರದೇಶಗಳಲ್ಲಿ ಹಾಗೂ ಅಲಗೇಶ್ವರ–ಗಾಳಿಗಂಡಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಈ ಅಸೌಕರ್ಯವನ್ನು ಮನಗಂಡು ಸಹಕರಿಸುವಂತೆ ವಿನಂತಿಸಲಾಗಿದೆ.ಹಾಗೆ ಈ ಕಾಮಗಾರಿ ಸುಗಮವಾಗಿ ನೆರವೇರಿಸಲು ವಿದ್ಯುತ್ ಸರಬರಾಜನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಅವಶ್ಯಕತೆ ಉಂಟಾಗಿದೆ.
