Saturday, April 25, 2026
Homeಕ್ರೈಮ್ಮೂಡಿಗೆರೆ: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಗುಳುಂ: ನಿವೃತ್ತ ತಹಸೀಲ್ದಾರ್ ಸೇರಿ ಅಧಿಕಾರಿಗಳ ವಿರುದ್ಧ...

ಮೂಡಿಗೆರೆ: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಗುಳುಂ: ನಿವೃತ್ತ ತಹಸೀಲ್ದಾರ್ ಸೇರಿ ಅಧಿಕಾರಿಗಳ ವಿರುದ್ಧ ಕೇಸ್ ದಾಖಲು

ಮೂಡಿಗೆರೆ: ತಾಲ್ಲೂಕಿನ ಗೋಣಿಬೀಡು ಹೋಬಳಿ ದೇವವೃಂದ ಗ್ರಾಮದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ ಸರ್ಕಾರಿ ಜಮೀನು ಅಕ್ರಮವಾಗಿ ಖಾಸಗಿ ವ್ಯಕ್ತಿಗಳ ಹೆಸರಿಗೆ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ.

ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು.2018-19ನೇ ಸಾಲಿನಲ್ಲಿ ನಡೆದಿದ್ದ ಈ ಅಕ್ರಮದಲ್ಲಿ, ಸರ್ವೇ ನಂ. 313ರ ಹೆಚ್.4 ಮತ್ತು ಹೆಚ್.5 ಭಾಗದಲ್ಲಿರುವ ಸರ್ಕಾರಿ ಭೂಮಿಯನ್ನು ನಿಯಮಾನುಸಾರ ಅರ್ಜಿ ಸಲ್ಲಿಸದೇ ನೇರವಾಗಿ ಖಾತೆ ಮಾಡಲಾಗಿದೆ ಎನ್ನಲಾಗಿದೆ. ಇನ್ನೊಂದು ಕಡತದ ಸಾಗುವಳಿ ಚೀಟಿಯನ್ನು ಅಪ್‌ಲೋಡ್ ಮಾಡಿ ದಾಖಲೆಗಳನ್ನು ತಿರುಚಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ.

ಈ ಪ್ರಕರಣದಲ್ಲಿ ನಿವೃತ್ತ ತಹಶೀಲ್ದಾರ್ ಸೇರಿದಂತೆ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ನಾಲ್ವರಲ್ಲಿ ಒರ್ವ ಅಧಿಕಾರಿ ಮೃತಪಟ್ಟಿದ್ದು, ಉಳಿದ ಮೂವರು ನಿವೃತ್ತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ

ನಿಕೇಶ್ ಪೆರೇರಾ ಮತ್ತು ಅನೀಶ್ ಪೆರೇರಾ ಎಂಬುವರಿಗೆ ಈ ಜಮೀನು ಮಂಜೂರು ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ
ಕರ್ನಾಟಕ ಭೂ ಕಂದಾಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ.

ಈ ಕುರಿತು ಹಾಲಿ ದಂಡಾಧಿಕಾರಿ ಅಶ್ವಿನಿ ಅವರು ದೂರು ನೀಡಿ ತನಿಖೆಗೆ ಆದೇಶ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!