ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿಯ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪ ನಡೆದಿದೆ.

ಡಿಕ್ಕಿಯ ಪರಿಣಾಮವಾಗಿ ವಿದ್ಯುತ್ ಕಂಬ ರಸ್ತೆ ಮೇಲೆ ಉರುಳಿ ಬಿದ್ದಿದ್ದು, ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಸ್ಥಳೀಯರು ತಕ್ಷಣ ನೆರವು ನೀಡಿದ್ದಾರೆ.
ಘಟನೆಯಿಂದ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿದ್ದು, ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
