Tuesday, May 5, 2026
Homeಜಿಲ್ಲಾಸುದ್ದಿಶೃಂಗೇರಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್‌ಗೆ ಚುನಾವಣಾಧಿಕಾರಿಯಿಂದ ECI ಪ್ರಮಾಣ ಪತ್ರ

ಶೃಂಗೇರಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್‌ಗೆ ಚುನಾವಣಾಧಿಕಾರಿಯಿಂದ ECI ಪ್ರಮಾಣ ಪತ್ರ

ಶೃಂಗೇರಿ ಅಂಚೆ ಮತ ಮರು ಎಣಿಕೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಅಭ್ಯರ್ಥಿ ಡಿ.ಎನ್‌ ಜೀವರಾಜ್ ಅವರಿಗೆ ಚುನಾವಣಾ ಅಧಿಕಾರಿ ಗೌರವ್ ಕುಮಾರ್ ಶೆಟ್ಟಿ ಪ್ರಮಾಣ ಪತ್ರ ನೀಡಿದರು.

ವೋಟ್ ಟ್ಯಾಂಪರಿಂಗ್ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಅವರು, ಟ್ಯಾಂಪರಿಂಗ್ ಆರೋಪದಡಿ ತಮ್ಮ ವಿರುದ್ಧ ದಾಖಲಾದ ಪ್ರಕರಣ ಠಾಣ ವ್ಯಾಪ್ತಿಗೆ ಬರುವುದಿಲ್ಲ. ಆಯೋಗ ಮಾಡಬೇಕಾದ ಕೆಲಸವನ್ನು ಕಾಂಗ್ರೆಸ್‌ನವರೆ ಮಾಡಿದ್ದಾರೆ. ಇವರ ಸರ್ಕಾರದಲ್ಲೇ ಇದ್ದ ಮತಗಳು ಟ್ಯಾಂಪರಿಂಗ್ ಆಗೋಕೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು

2023ರ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ 692 ಅಂಚೆ ಮತ, ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ 569 ಅಂಚೆ ಮತ ಬಿದ್ದಿತ್ತು. ಈಗ ನಡೆದ ಮರು ಎಣಿಕೆಯಲ್ಲಿ‌ ಜೀವರಾಜ್ 690 ಮತ (2 ಮತ ಕಡಿಮೆ) ರಾಜೇಗೌಡ 314 ಮತ (251 ಮತ ಕಡಿಮೆ) ಪಡೆದಿದ್ದಾರೆ. ರಾಜೇಗೌಡರಿಗೆ ಬಿದ್ದ 318 ಮತಗಳು ಮರು ಎಣಿಕೆಯಲ್ಲಿ ಅಸಿಂಧು ಎಂದು ಘೋಷಿಸಲಾಗಿದೆ. ಈ ಮೂಲಕ ಅಂಚೆ ಮತಗಳ ಮರು ಎಣಿಕೆಯಲ್ಲಿ 52 ಮತಗಳಿಂದ ಬಿಜೆಪಿ ಅಭ್ಯರ್ಥಿ ಜೀವರಾಜ್ ಮೇಲುಗೈ ಸಾಧಿಸಿದ್ದಾರೆ. 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!