Thursday, August 13, 2026
Homeಕ್ರೈಮ್ಶೃಂಗೇರಿ ಅಂಚೆಮತಗಳ ಎಣಿಕೆ ವಿವಾದ: ನೂತನ ಶಾಸಕ ಜೀವರಾಜ್ ವಿರುದ್ಧದ FIR ಗೆ ಹೈಕೋರ್ಟ್ ತಡೆ

ಶೃಂಗೇರಿ ಅಂಚೆಮತಗಳ ಎಣಿಕೆ ವಿವಾದ: ನೂತನ ಶಾಸಕ ಜೀವರಾಜ್ ವಿರುದ್ಧದ FIR ಗೆ ಹೈಕೋರ್ಟ್ ತಡೆ

Telegram Group
Join Now

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ.

ಈ ಪ್ರಕರಣದಲ್ಲಿ ಮಾಜಿ ಶಾಸಕ ಡಿ.ಎನ್. ಜೀವರಾಜ್, ಅಂದಿನ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಹಾಗೂ ಚುನಾವಣಾಧಿಕಾರಿ ವೇದಾಮೂರ್ತಿ ಅವರ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಕಾಂಗ್ರೆಸ್ ಚುನಾವಣಾ ಏಜೆಂಟ್ ಸುಧೀರ್ ಕುಮಾರ್ ಮುರೊಳ್ಳಿ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಈ ಕಾನೂನು ಕ್ರಮ ಜರುಗಿಸಲಾಗಿತ್ತು, ಆದರೆ ಈಗ ನ್ಯಾಯಾಲಯವು ಈ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡುವ ಮೂಲಕ ಸಂಬಂಧಪಟ್ಟವರಿಗೆ ತಾತ್ಕಾಲಿಕ ರಿಲೀಫ್ ನೀಡಿದೆ.

ಚುನಾವಣಾದ ಫಲಿತಾಂಶದ ನಂತರ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು ಈಗ ಪ್ರಕರಣವು ಸದ್ಯ ನ್ಯಾಯಲಯದಲ್ಲಿದೆ. ಸದ್ಯ ಹೈಕೋರ್ಟ್‌ ಎಫ್‌ ಐ ಆರ್‌ ಗೆ ತಡೆ ನೀಡಿರುವುದರಿಂದ ಮುಂದಿನ ಕಾನೂನು ಹೋರಾಟ ಕುತೂಹಲ ಕೆರಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments