ಅಕಾಲಿಕ ಗಾಳಿ ಮಳೆ ತಂದ ಅನಾಹುತಕ್ಕೆ ಮನೆಯೊಂದು ಸಂಪೂರ್ಣ ಜಖಂಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಮರ್ಕಲ್ ಗ್ರಾಮ ಪಂ ವ್ಯಾಪ್ತಿಯಲ್ಲಿ ನಡೆದಿದೆ.
ಹೌದು .. ಶುಕ್ರವಾರ ಸಂಜೆ ಸುರಿದ ಮಳೆ ಹಾಗೂ ಭಾರೀ ಗಾಳಿಗೆ ಮಾಸ್ತಿ ಕೊಟ್ಟಿಗೆ ಗ್ರಾಮದ ಲಲಿತಮ್ಮ ಕೋಂ ಗೋಪಾಲ್ರವರ ಮನೆಯ ಮೇಲ್ಛಾವಣಿ ಹಾರಿಹೋಗಿದ್ದು, ಕುಟುಂಬದ ಸ್ಥಿತಿ ಅತಂತ್ರವಾಗಿದೆ.
ಸ್ಥಳಕ್ಕೆ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ.ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ವರದಿ: ವಿಠಲ್, ಶೃಂಗೇರಿ
