Friday, September 25, 2026
Homeಜಿಲ್ಲಾಸುದ್ದಿಶೃಂಗೇರಿ ಅಂಚೆ ಮತ ಮರು ಎಣಿಕೆಗೆ ಬಿಗ್‌ ಟ್ವಿಸ್ಟ್‌: ಜೀವರಾಜ್‌ʼಗೆ ಹಿನ್ನಡೆ, ಶಾಸಕರಾಗಿ ಮುಂದುವರೆಯುವಂತೆ ರಾಜೇಗೌಡರಿಗೆ...

ಶೃಂಗೇರಿ ಅಂಚೆ ಮತ ಮರು ಎಣಿಕೆಗೆ ಬಿಗ್‌ ಟ್ವಿಸ್ಟ್‌: ಜೀವರಾಜ್‌ʼಗೆ ಹಿನ್ನಡೆ, ಶಾಸಕರಾಗಿ ಮುಂದುವರೆಯುವಂತೆ ರಾಜೇಗೌಡರಿಗೆ ಸುಪ್ರೀಂ ಆದೇಶ

Telegram Group
Join Now

ಶೃಂಗೇರಿ ಅಂಚೆ ಮತ ಮರು ಎಣಿಕೆಗೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಶಾಸಕರಾಗಿ ಬಿಜೆಪಿ ಜೀವರಾಜ್‌ ಆಯ್ಕೆಯಾಗುವ ನಿಟ್ಟಿನಲ್ಲಿ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆ ನೀಡಿದೆ. ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶಿಸಿದೆ. ಸುಪ್ರೀಂ ಆದೇಶದಿಂದ ರಾಜೇಗೌಡಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಅಂಚೆ ಮತ ಮರು ಎಣಿಕೆಗೆ ಆದೇಶಿಸಿದ್ದ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಕಾಂಗ್ರೆಸ್​​ನ ರಾಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ ಸುಪ್ರೀಂಕೋರ್ಟ್​ ವಿಚಾರಣೆ ನಡೆಸಿದ್ದು, ​​ ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಮರು ಮತ ಎಣಿಕೆಯ ದಾಖಲೆ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿ, ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿದೆ. ಅಂಚೆ ಮತ ಮರು ಎಣಿಕೆಯಲ್ಲಿ ಬಿಜೆಪಿ ಡಿ.ಎನ್‌. ಜೀವರಾಜ್‌ ಗೆಲುವು ಸಾಧಿಸಿದ್ದರು. ಆದರೆ, ಇದೀಗ ಯಥಾಸ್ಥಿತಿ ಮುಂದುವರಿಸಲು ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ. ಇದರಿಂದ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಅವರೇ ಮತ್ತೆ ಶಾಸಕರಾಗಿ ಮುಂದುವರಿಯಲಿದ್ದಾರೆ.

ಇದರೊಂದಿಗೆ ಕಾಂಗ್ರೆಸ್​​​ನ ರಾಜೇಗೌಡ ಅವರಿಗೆ ಮತ್ತೆ ಶಾಸಕ ಸ್ಥಾನ ದಕ್ಕಿದಂತಾಗಿದ್ದು, ಇನ್ನೊಂದೆಡೆ ಮೊನ್ನೆ ಅಷ್ಟೇ ಮರು ಮತ ಎಣಿಕೆಯಲ್ಲಿ ಗೆದ್ದು ಶಾಸಕರಾಗಿ ಪ್ರಮಾಣ ವಚನ ಸ್ವೀರಿಕರಿಸಿದ್ದ ಬಿಜೆಪಿಯ ಜೀವರಾಜ್​​ಗೆ ತಾತ್ಕಾಲಿಕ ಹಿನ್ನಡೆಯಾದಂತಾಗಿದೆ.

ವರದಿ: ಶಾಲಿನಿ ಪಿ.ಗೌಡ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!