Wednesday, May 13, 2026
Homeಸಿನೆಮಾಬೆಳ್ಳಿ ತೆರೆ ಜೊತೆ ಕಿರುತೆರೆಯಲ್ಲೂ ಮಿಂಚಿದ್ದ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ!

ಬೆಳ್ಳಿ ತೆರೆ ಜೊತೆ ಕಿರುತೆರೆಯಲ್ಲೂ ಮಿಂಚಿದ್ದ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ!

ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಪ್ರತಿಭಾವಂತ ನಟ & ಯಶಸ್ವಿ ನಿರ್ಮಾಪಕ ದಿಲೀಪ್ ರಾಜ್ ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ದಿಲೀಪ್ ರಾಜ್ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದರು. ಆ ಪಾತ್ರಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಿನಿಮಾ ಮತ್ತು ಟಿವಿ ಎರಡರಲ್ಲೂ ನಟ, ನಿರ್ಮಾಪಕ ದಿಲೀಪ್ ರಾಜ್ ಗುರುತಿಸಿಕೊಂಡಿದ್ದರು. 2005ರಲ್ಲಿ ಬಿಡುಗಡೆಯಾದ ಬಾಯ್‌ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು. ಮಿಲನ ಸಿನಿಮಾದಲ್ಲಿ ವಿಲನ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದರು.

ಸುಗ್ರೀವ, ಗೆಳೆಯ, ಯೂಟರ್ನ್, ಸೇರಿದಂತೆ 28 ಚಿತ್ರಗಳಲ್ಲಿ ದಿಲೀಪ್ ರಾಜ್ ನಟಿಸಿದ್ದಾರೆ. ಸದ್ಯ ಜನಪ್ರಿಯ ಧಾರಾವಾಹಿ ‘ಕೃಷ್ಣ ರುಕ್ಕು’ ಧಾರವಾಹಿ ಪ್ರೊಡ್ಯೂಸ್ ಮಾಡುತ್ತಿದ್ದರು. 47 ವರ್ಷದ ದಿಲೀಪ್‌ ರಾಜ್‌ ಕೊನೆಯದಾಗಿ ʼಲವ್‌ ಮಾಕ್ಟೇಲ್‌ 3ʼ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಮನೆಯೊಂದು ಮೂರು ಬಾಗಿಲು, ರಥಸಪ್ತಮಿ, ಪ್ರೀತಿಗಾಗಿ ಧಾರಾವಾಹಿಗಳಲ್ಲೂ ನಟಿಸಿದ್ದರು.

ಇಂದು ಬೆಳಗಿನ ಜಾವ ದಿಲೀಪ್ ರಾಜ್‌ಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ದಿಲೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ. ದಿಲೀಪ್ ರಾಜ್ ಅವರ ಮೃತದೇಹ ಕುಮಾರಸ್ವಾಮಿ ಲೇಔಟ್‌ನ ಅಪೋಲೊ ಆಸ್ಪತ್ರೆಯಲ್ಲಿರಿಸಲಾಗಿದೆ. ದಿಲೀಪ್‌ ನಿಧನಕ್ಕೆ ಕನ್ನಡ ಚಿತ್ರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!