ಹಿಂದೆ ಬೆಂಗಳೂರಿಗೆ ಸೀಮಿತವಾಗಿದ್ದ ಬೈಕ್ ವೀಲಿಂಗ್ (Bike Wheeling) ಪುಂಡಾಟಿಕೆ ಈಗ ರಾಜ್ಯದ ನಾನಾ ಭಾಗಗಳಿಗೆ ಹರಡಿದ್ದು, ಇವರ ಅಟ್ಟಹಾಸಕ್ಕೆ ಜನ ನಡುಗುವಂತಾಗಿದೆ. ಇದೀಗ ಚಿಕ್ಕಮಗಳೂರಿನಲ್ಲೂ ವೀಲಿಂಗ್ ಪುಂಡರ ಹಾವಳಿ ಹೆಚ್ಚಾಗಿದೆ.
ಚಿಕ್ಕಮಗಳೂರು: ರಸ್ತೆಯಲ್ಲಿ ಅಪಾಯಕಾರಿಯಾಗಿ ಬೈಕ್ ವ್ಹೀಲಿಂಗ್ ಮಾಡ್ತಿದ್ದ ಯುವಕನೊಬ್ಬನನ್ನು ಪೊಲೀಸರು ಹಿಡಿದು ಬೈಕ್ ವಶಪಡಿಸಿಕೊಂಡಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.

ನಗರದ ವಿಜಯಪುರದ ಬದ್ರೀಯ ಸರ್ಕಲ್ ರಸ್ತೆಯಲ್ಲಿ ಯುವಕನೊಬ್ಬ ಅಪಾಯಕಾರಿಯಾಗಿ ಬೈಕ್ ವೀಲಿಂಗ್ ಮಾಡುತ್ತಿದ್ದ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಬಸವನಹಳ್ಳಿ ಪೊಲೀಸ್ ಠಾಣೆಯ ಪಿ.ಎಸ್.ಐ ಕಲೈಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ವ್ಹೀಲಿಂಗ್ ನಡೆಸುತ್ತಿದ್ದ ಚಿಕ್ಕಮಗಳೂರು ತಾಲ್ಲೂಕು ಬ್ಯಾಗದಹಳ್ಳಿ ನಿವಾಸಿ ಅರುಣ್ ಬಿ.ಎಂ(20 ವರ್ಷ) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ವ್ಹೀಲಿಂಗ್ ಗೆ ಬಳಸಿದ್ದ ಬೈಕ್ ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..