Wednesday, June 10, 2026
Homeಜಿಲ್ಲಾಸುದ್ದಿಮೂಡಿಗೆರೆ: ಅಂಬೇಡ್ಕರ್ ಆದರ್ಶಗಳು ಭಾರತೀಯರಿಗೆ ಸರ್ವಕಾಲಕ್ಕೂ ದಾರಿದೀಪ: ಯತೀಶ್ ಗೌಡ

ಮೂಡಿಗೆರೆ: ಅಂಬೇಡ್ಕರ್ ಆದರ್ಶಗಳು ಭಾರತೀಯರಿಗೆ ಸರ್ವಕಾಲಕ್ಕೂ ದಾರಿದೀಪ: ಯತೀಶ್ ಗೌಡ

ಬೆಟ್ಟಗೆರೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣಾ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು “ಅಂಬೇಡ್ಕರ್ ಹಬ್ಬ”ವಾಗಿ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿ.ಆರ್. ಯತೀಶ್ ಗೌಡ, ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಡಾ. ಅಂಬೇಡ್ಕರ್ ಅವರ ಆದರ್ಶಗಳು ಇಂದಿಗೆ ಮಾತ್ರ ಸೀಮಿತ ವಾಗದ ಸರ್ವಕಾಲಕ್ಕೂ ಸಮಾಜಕ್ಕೆ ದಾರಿದೀಪವಾಗಿವೆ” ಎಂದು ಹೇಳಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿ.ಬಿ. ನಿಂಗಯ್ಯ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮೀಸಲಾತಿ ವ್ಯವಸ್ಥೆ ಜಾರಿಗೆ ತಂದ ಅಂಬೇಡ್ಕರ್ ಅವರು ಮಹಿಳೆಯರ ಹಕ್ಕುಗಳಿಗೂ ಮಹತ್ವ ನೀಡಿದ ಮಹಾನ್ ನಾಯಕರು” ಎಂದು ಸ್ಮರಿಸಿದರು.
ಅಂಬೇಡ್ಕರ್ ವಿಚಾರಗಳ ಕುರಿತು ಉಪನ್ಯಾಸ ನೀಡಿದ ಮರಗುಂದ ಪ್ರಸನ್ನ ಗೌಡ, ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕು ದೊರಕಲು ಅಂಬೇಡ್ಕರ್ ಅವರ ಕೊಡುಗೆ ಅಪಾರ. ಕಾರ್ಮಿಕರು, ಮಹಿಳೆಯರು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಗೆ ಅವರು ಅನೇಕ ಕಾನೂನುಗಳನ್ನು ರೂಪಿಸಿದರು” ಎಂದು ಹೇಳಿದರು.

ಬಹುಜನ ಸಮಾಜವಾದಿ ಪಕ್ಷದ ತಾಲ್ಲೂಕು ಅಧ್ಯಕ್ಷ ಲೋಕವಳ್ಳಿ ರಮೇಶ್ ಮಾತನಾಡಿ ಎಲ್ಲಾ ಜಾತಿ–ಧರ್ಮದ ಜನರು ಸಮಾನವಾಗಿ ಅಧಿಕಾರ ಹಂಚಿಕೊಂಡಿರುವ ಮಾದರಿ ಗ್ರಾಮ ಪಂಚಾಯಿತಿ ಬೆಟ್ಟಗೆರೆ ಗ್ರಾಮ ಪಂಚಾಯಿತಿ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಂಬೇಡ್ಕರ್ ಕ್ಲಾಸ್‌ನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮಕ್ಕೆ ಬಿ.ಎಂ. ಶಂಕರ್ ಅಧ್ಯಕ್ಷತೆ ವಹಿಸಿದ್ದರು. ಬಿ.ಆರ್. ಸುಬ್ಬಯ್ಯ, ಜಾಕೀರ್ ಹುಸೇನ್, ಕೆ.ಎನ್. ಮನೂಜ್, ಬಿ.ಎಂ. ಮಂಜುನಾಥ, ಜಯಗೌಡ, ಕೆ.ಎನ್. ಕುಮಾರ್, ಬಿ.ಬಿ. ಅಶೋಕ್, ಬಿ.ಎಂ. ಅಣ್ಣಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಹ ಕಾರ್ಯದರ್ಶಿ ನಿಖಿಲ್ ಸ್ವಾಗತಿಸಿದರು. ಕಾರ್ಯದರ್ಶಿ ಲೋಕೇಶ್ ಬೆಟ್ಟಗೆರೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!