ಮೂಡಿಗೆರೆ: ಅಗತ್ಯ ವಸ್ತುಗಳ ಮಿತವ್ಯಯ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕರೆಗೆ ದೇಶಾದ್ಯಂತ ಪರ-ವಿರೋಧದ ಚರ್ಚೆಗಳು ಆರಂಭವಾಗಿವೆ ಈ ಮಧ್ಯೆ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಪ್ರಧಾನಿಯವರ ಕರೆಯನ್ನು ಅಕ್ಷರಶಃ ಪಾಲಿಸುವ ಮೂಲಕ ಸಾರ್ವಜನಿಕರಿಗೆ ಮಾದರಿಯಾಗಿದೆ
ತಮಗೆ ನೀಡಿದ್ದ ಎಸ್ಕಾರ್ಟ್ ವಾಹನವನ್ನ ಹಿಂಪಡೆಯಲು ಚಿಕ್ಕಮಗಳೂರು ಎಸ್ಪಿಗೆ ಮನವಿ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೂಲದ ಎಂ.ಕೆ.ಪ್ರಾಣೇಶ್‌ರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ಕೂಡ ವ್ಯಕ್ತವಾಗ್ತಿದೆ.
ಒಟ್ಟಿನಲ್ಲಿ, ಪ್ರಧಾನಿ ಮೋದಿಯವರ ಮಿತವ್ಯಯದ ಕರೆಗೆ ರಾಜಕೀಯ ವಲಯದಲ್ಲಿ ಹಾಗೂ ಸಾರ್ವಜನಿಕರಲ್ಲಿ ಪರ-ವಿರೋಧದ ಚರ್ಚೆಗಳು ಜೋರಾಗಿಯೇ ನಡೆಯುತ್ತಿವೆ
