Saturday, August 15, 2026
Homeಕ್ರೈಮ್ಹಾಸನ: ಟೈರ್ ಸ್ಫೋಟ, ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್: ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!

ಹಾಸನ: ಟೈರ್ ಸ್ಫೋಟ, ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್: ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!

Telegram Group
Join Now

ಹಾಸನ: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನ ಟೈಯರ್ ಸ್ಪೋಟಗೊಂಡು ಭಾರೀ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಬಳಿ ನಡೆದಿದೆ.

ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ 36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಕೆಲ ಪ್ರಯಾಣಿಕರ ಮೊಬೈಲ್, ಲಗೇಜ್ ಸೇರಿದಂತೆ ಹಲವು ವಸ್ತುಗಳು ಬೆಂಕಿಗಾಹುತಿಯಾಗಿವೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments