ಚಿಕ್ಕಮಗಳೂರು: ನೂತನ ಜಿಲ್ಲಾಧಿಕಾರಿಯಾಗಿ ಭನ್ವರ್ ಸಿಂಗ್ ಮೀನಾ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಅವರು ಗುಲ್ಬರ್ಗಾ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ಇದೇ ವೇಳೆ ಹಾಲಿ ಜಿಲ್ಲಾಧಿಕಾರಿಯಾಗಿದ್ದ ಎಚ್ ಎಂ ನಾಗರಾಜ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಸುಮಾರು 6 ತಿಂಗಳು ಕಾಲ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಣೆ ಮಾಡಿದ್ದರು.
