Tuesday, July 14, 2026
Homeಕ್ರೈಮ್ಶೃಂಗೇರಿ ಅಂಚೆ ಮತ ಮರು ಎಣಿಕೆ ಕೇಸ್ : ಜುಲೈ 23ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಶೃಂಗೇರಿ ಅಂಚೆ ಮತ ಮರು ಎಣಿಕೆ ಕೇಸ್ : ಜುಲೈ 23ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

Telegram Group
Join Now

 ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಜುಲೈ 23ಕ್ಕೆ ವಿಚಾರಣೆ ಮುಂದೂಡಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾಂಗ್ರೆಸ್​​ನ ಟಿ.ಡಿ. ರಾಜೇಗೌಡ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಆದೇಶ ರದ್ದು ಮಾಡಿ ತಡೆ ನೀಡಿದ್ದ ಸುಪ್ರೀಂಕೋರ್ಟ್, ಶಾಸರಾಗಿ ಟಿ.ಡಿ. ರಾಜೇಗೌಡ ಅವರನ್ನೇ ಮುಂದುವರಿಸಿತ್ತು. ಹೀಗಾಗಿ ಮತ ಮರು ಎಣಿಕೆ ಬಳಿಕ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಬಿಜೆಪಿಯ ಜೀವರಾಜ್​​ಗೆ ಹಿನ್ನಡೆ ಆಗಿತ್ತು.

ಮೇ 2ರಂದು ನಡೆದ ಮರು ಮತ ಎಣಿಕೆ ವೇಳೆ ಅಂಚೆ ಮತಪತ್ರ ತಿರುಚಲಾಗಿದೆ ಎಂದು ಆರೋಪಿಸಿ, ಜತೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಮೇ 11ರಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮರು ಮತ ಎಣಿಕೆ ಪ್ರಕ್ರಿಯೆ ಮತ್ತು ಫಲಿತಾಂಶಕ್ಕೆ ಮಧ್ಯಂತರ ತಡೆ ನೀಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹಾಗೂ ಮರು ಎಣಿಕೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು. ಇದರಿಂದ ರಾಜೇಗೌಡ ಅವರ ಶಾಸಕತ್ವ ಊರ್ಜಿತಗೊಂಡಿತ್ತು.

ಅದರಂತೆ ಇಂದು ಅರ್ಜಿಯ ವಿಚಾರಣೆ ನಡೆಸಿ ಜುಲೈ 23ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್. ಭಾರೀ ಕುತೂಹಲ ಮೂಡಿಸಿರುವ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ವಿಚಾರ ಮತ್ತೆ ಮುಂದೂಡಿಕೆಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments