Wednesday, May 27, 2026
Homeಕ್ರೈಮ್ಹಾಸನ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ: ತಾಯಿ- ಮಗ ಸ್ಥಳದಲ್ಲೇ ಸಾವು!

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ: ತಾಯಿ- ಮಗ ಸ್ಥಳದಲ್ಲೇ ಸಾವು!

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾದ ಪರಿಣಾಮ ತಾಯಿ-ಮಗ ಸಾವನ್ನಪ್ಪಿದ ಘಟನೆ ಆಲೂರು ತಾಲೂಕಿನ ಹೊನ್ನೇನಹಳ್ಳಿ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಕುದುರುವಳ್ಳಿ ಗ್ರಾಮದ ಪ್ರಿಯಾಂಕ (28) ಹಾಗೂ ವಿನಿತ್ (7) ಎಂದು ಗುರುತಿಸಲಾಗಿದೆ. ಮಗನನ್ನು ಹಾಸನದ ಶಾಲೆಗೆ ಸೇರಿಸಲು ವರ್ಗಾವಣೆ ಪತ್ರ ತೆಗೆದುಕೊಂಡು ಹೋಗಲು ಇಬ್ಬರು ಬಂದಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ

ಆಟೋ ಚಾಲಕ ಅಬ್ಬಾಸ್ (52), ಬಾಲಕ ಸಾಗರ್ (13) ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಲೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!