Saturday, July 18, 2026
Homeಜಿಲ್ಲಾಸುದ್ದಿಮೂಡಿಗೆರೆ: ನಯನಾ ಮೋಟ್ಟಮ್ಮಗೆ ಸಚಿವ ಸ್ಥಾನ ಸಿಗಲೆಂದು ದೇವರಲ್ಲಿ ಪೂಜೆ ಸಲ್ಲಿಕೆ

ಮೂಡಿಗೆರೆ: ನಯನಾ ಮೋಟ್ಟಮ್ಮಗೆ ಸಚಿವ ಸ್ಥಾನ ಸಿಗಲೆಂದು ದೇವರಲ್ಲಿ ಪೂಜೆ ಸಲ್ಲಿಕೆ

Telegram Group
Join Now

ಮೂಡಿಗೆರೆ: ಶಾಸಕಿ ನಯನಾ ಮೋಟಮ್ಮ ಅವರಿಗೆ ನೂತನ ಸಂಪುಟದಲ್ಲಿ ಸಚಿವ ಸ್ಥಾನ ದೊರಕಲೆಂದು ಮಂಗಳವಾರ ತಾಲೂಕಿನ ದೇವರಮನೆ ದೇವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಬಣಕಲ್ ಹೋಬಳಿ ಅಧ್ಯಕ್ಷ ಸುಬ್ರಹ್ಮಣ್ಯ ಮಾತನಾಡಿ, ಜಿಲ್ಲೆಯಲ್ಲಿ ಅನೇಕ ಜ್ವಲಂತ ಸಮಸ್ಯೆಗಳಿವೆ. ಅವುಗಳನ್ನು ಪರಿಹರಿಸಲು ಶಾಸಕಿ ನಯನಾ ಮೋಟಮ್ಮ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ದೊರಕಿದರೆ ಅನುಕೂಲವಾಗುತ್ತದೆ. ಕಳೆದ 3 ಅವದಿಯಲ್ಲಿ ಮೂಡಿಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗಿರಲಿಲ್ಲ. ನಯನಾ ಮೋಟಮ್ಮ ಅವರು, ತನ್ನ ಶಕ್ತಿ ಮೀರಿ ಪಕ್ಷ ಸಂಘಟನೆ ಮಾಡಿದ್ದರ ಫಲವಾಗಿ ಮೂಡಿಗೆರೆಯಲ್ಲಿ ಶಾಸಕ ಸ್ಥಾನ ಗಿಟ್ಟಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಸಿ.ಎಸ್.ವಿನಯ್ ಕುಮಾರ್‌ ಮಾತನಾಡಿ, ನಯನಾ ಮೋಟಮ್ಮ ಅವರು ಶಾಸಕರಾದ ಬಳಿಕವೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಉತ್ತಮ ಶಾಸಕಿಯಾಗಿ ಗುರುತಿಸಿಕೊಂಡಿದ್ದಾರೆ. ಮಹಿಳಾ ನಾಯಕತ್ವಕ್ಕೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ಮಲೆನಾಡು ಭಾಗಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಮನೋಜ್ ಬೆಟ್ಟಗೆರೆ, ಗ್ರಾರಂಟಿ ಕಮಿಟಿ ಸದಸ್ಯ ಅರುಣ್ ಗುತ್ತಿ ಇತರರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments