Saturday, July 18, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಮಕ್ಕಳಿಗೆ ಒಳ್ಳೆಯ ಶಿಕ್ಷಣವನ್ನು ಕೊಡಿಸಿದ್ರೆ ಸಮಾಜದಲ್ಲಿ ಉತ್ತಮ ಪ್ರಜೆಯಾಗುತ್ತಾರೆ: ಉಪ್ಪಳ್ಳಿ ಭರತ್

ಚಿಕ್ಕಮಗಳೂರು: ಮಕ್ಕಳಿಗೆ ಒಳ್ಳೆಯ ಶಿಕ್ಷಣವನ್ನು ಕೊಡಿಸಿದ್ರೆ ಸಮಾಜದಲ್ಲಿ ಉತ್ತಮ ಪ್ರಜೆಯಾಗುತ್ತಾರೆ: ಉಪ್ಪಳ್ಳಿ ಭರತ್

Telegram Group
Join Now

ಚಿಕ್ಕಮಗಳೂರು: ನಗರದ ಉಪ್ಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಕಾಂಗ್ರೆಸ್ ಮುಖಂಡ ಉಪ್ಪಳ್ಳಿ ಭರತ್ ಹಾಗೂ ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯೆ ಕುಸುಮ ಭರತ್ ನೇತೃತ್ವದಲ್ಲಿ ನನ್ನ ಶಾಲೆ ನನ್ನ ಹಕ್ಕು ಧೈಯ ವಾಕ್ಯದಡಿಯಲ್ಲಿ ಕಾರ್ಯಕ್ರಮ ನಡೆಯಿತು.


ಈ ಕುರಿತು ಕಾಂಗ್ರೆಸ್ ಮುಖಂಡ ಉಪ್ಪಳ್ಳಿ ಭರತ್ ಮಾತನಾಡಿ, ಪೋಷಕರು ತಮ್ಮ ಮಕ್ಕಳಿಗೆ ಹಣ, ಐಶ್ವರ್ಯ, ಅಂತಸ್ತು ಮಾಡದೇ ಶಿಕ್ಷಣವನ್ನು ಕೊಡಿಸಿದಲ್ಲಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ರೂಪುಗೊಳ್ಳುತ್ತಾರೆ ಎಂದು ಹೇಳಿದರು.

ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಗಳಲಿ ಭಾಗವಹಿಸುವುದರಿಂದ ಮಾನಸಿಕವಾಗಿ, ದೈಹಿಕವಾಗಿ ಸದೃಢಗೊಳ್ಳಬಹುದಾಗಿದೆ. ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು. ಮೊಬೈಲ್, ವಾಟ್ಸಾಪ್, ಫೇಸ್ಟುಕ್ ಇವುಗಳಿಂದ ದೂರವಿರಬೇಕೆಂದು ಸಲಹೆ ನೀಡಿದರು.

ಸ್ವತಂತ್ರ ಪೂರ್ವದಲ್ಲಿ ಸ್ವಾತಂತ್ರ್ಯ ಚಳುವಳಿ ಹೋರಾಟಗಳಲ್ಲಿ ಭಾಗಿಯಾದವರು ದೇಶ, ರಾಜ್ಯವನ್ನು ಆಳಿದ ಬಹುತೇಕರು ಇತಿಹಾಸದ ಪುಟಗಳಲ್ಲಿ ಸೇರ್ಪಡೆಯಾಗಿರುವವರು ಕೂಡ ಸರ್ಕಾರಿ ಶಾಲೆಯಲ್ಲಿ ಓದಿದವರು ಎಂದು ತಿಳಿಸಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯೆ ಕುಸುಮ ಭರತ್ ಮಾತನಾಡಿ, ಮಕ್ಕಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕು. ತಮ್ಮ ಪೋಷಕರು ತಮ್ಮ ಮೇಲೆ ಅಪಾರವಾದ ಕನಸನ್ನು ಕಟ್ಟಿಕೊಂಡಿರುತ್ತಾರೆ. ಅವರ ಕನಸಿಗೆ ಮಸಿ ಬಳಿಯಬಾರದು ಎಂದು ಹೇಳಿದರು.

ಕಲ್ಲನ್ನು ಕೆತ್ತಿ ಒಂದು ಶಿಕ್ಷೆಯನ್ನು ತಯಾರು ಮಾಡಲು ಹೊರಟಿರುವ ಶಿಕ್ಷಕರಿಗೆ ಹಾಗೂ ಹಿರಿಯ, ಕಿರಿಯರಿಗೆ ಗೌರವವನ್ನು ಕೊಡುವುದನ್ನು ಕಲಿಯಬೇಕು. ಸರ್ಕಾರಿ ಶಾಲೆಯಲ್ಲಿ ಓದಿ ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯರನ್ನು ಸ್ಮರಿಸಿದರು.

ಶಾಲೆಯ ಮುಖ್ಯೋಪಾಧ್ಯಾಯ ಹೆಚ್.ಸೋಮಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿಯರಾದ ಪ್ರಮಲ್ಲ ಡಿಸೋಜಾ ನಿರೂಪಿಸಿ, ಶಶಿಕಲಾ ವಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments