ಬಾಳೆಹೊನ್ನೂರು: ಇಲ್ಲಿನ ಗ್ರಾಮ ಪಂಚಾಯತಿ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ‘ಬೆಸುಗೆ – ಬೆಸುಗೆ’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಶಾಲಾ ಮಕ್ಕಳಿಗೆ ಜೆಸಿಐ ಬಾಳೆಹೊನ್ನೂರು ಕ್ಲಾಸಿಕ್ ವತಿಯಿಂದ ಉಚಿತವಾಗಿ ಸ್ಟೀಲ್ ಕುಡಿಯುವ ನೀರಿನ ಬಾಟಲಿಗಳನ್ನು ವಿತರಿಸಲಾಯಿತು.

ಮಕ್ಕಳ ಆರೋಗ್ಯ ಮತ್ತು ಪರಿಸರ ಕಾಳಜಿಯ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಮುಕ್ತ ಬಳಕೆಯನ್ನು ಪ್ರೋತ್ಸಾಹಿಸಲು ಈ ಉಪಯುಕ್ತ ಕೊಡುಗೆಯನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಗಣ್ಯರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಹಲವು ದಾನಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಿದ್ದರು.

ದಾನಿಗಳು: ಸುಚಿತಾ ಉಚಿತ್ ಹೆಗ್ಡೆ, ಜೆಸಿಐ ಪದಾಧಿಕಾರಿಗಳು: ಜೆಸಿ ಸುಧಾಕರ್, ಜೆಸಿ ಇಬ್ರಾಹಿಂ ಶಾಫಿ, ಗ್ರಾಮ ಪಂಚಾಯತಿ ಅಧಿಕಾರಿಗಳು: ಪಿ.ಡಿ.ಓ (PDO) ಹಾಗೂ ಮಹೇಶ್ ಆಚಾರ್ಯ,ವೈದ್ಯಾಧಿಕಾರಿಗಳು: ಡಾ. ಪ್ರೀತಮ್ ಹಾಗೂ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಸಿಬ್ಬಂದಿ, ಜೆಸಿಐ ಸಂಸ್ಥೆಯ ಸದಸ್ಯರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
