Friday, June 5, 2026
Homeಜಿಲ್ಲಾಸುದ್ದಿಶೃಂಗೇರಿ: ಶಾರದಾ ಪೀಠಕ್ಕೆ ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಭೇಟಿ: ಪೂಜೆ ಸಲ್ಲಿಕೆ

ಶೃಂಗೇರಿ: ಶಾರದಾ ಪೀಠಕ್ಕೆ ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಭೇಟಿ: ಪೂಜೆ ಸಲ್ಲಿಕೆ

ಶೃಂಗೇರಿ: ಮಲೆನಾಡಿನ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರು ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದರು.

ಈ ವೇಳೆ ಶೃಂಗೇರಿ ಮಾಜಿ ಶಾಸಕ ಜೀವರಾಜ್, ಪಕ್ಷದ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್‌ ಶೇಖಾವತ್‌ ಅವರನ್ನು ಬರಮಾಡಿಕೊಂಡರು. ಬಳಿಕ ಶಾರದಾಂಬೆಯ ದರ್ಶನ ಪಡೆದರು.

ಈ ವೇಳೆ ಶೃಂಗೇರಿ ಮಂಡಲದ ಅಧ್ಯಕ್ಷರಾದ ಉಮೇಶ್ ತಲಗಾರು, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಹರೀಶ್ ಶೆಟ್ಟಿ, ಮಂಡಲದ ಪ್ರಧಾನ ಕಾರ್ಯದರ್ಶಿಯಾದ ನೂತನ ಕುಮಾರ್ , ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶೃಂಗೇರಿ ಶಿವಣ್ಣ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!