ಚಿಕ್ಕಮಗಳೂರು: ಕಾಫಿನಾಡಿನ ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವಿದ್ದ ಪ್ಲೆಕ್ಸ್‌ಗೆ ಇಬ್ಬರು ಯುವಕರು ಬೇಡ್‌ನಿಂದ ಹಾನಿ ಮಾಡಿರುವ ಘಟನೆ ಚಿಕ್ಕಮಗಳೂರಿನ ಹೃದಯ ಭಾಗದ ಹನುಮಂತಪ್ಪ ವೃತ್ತದಲ್ಲಿ ನಡೆದಿದೆ.
“ನನಗೆ ಈ ಶಾಸಕ ಇಷ್ಟವಿಲ್ಲ” ಎಂದು ಹೇಳುತ್ತಾ ಬ್ಯಾನರ್ ಗೆ ಬೇಡ್ ಹಾಕಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಬಸವನಹಳ್ಳಿ ಠಾಣೆ ಪೊಲೀಸರು ತಕ್ಷಣವೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಚಿಕ್ಕಮಗಳೂರು ತಾಲೂಕಿನ ಕೊಳಗಾಮೆ ಗ್ರಾಮದ ಸಂದೀಪ್ (27) ಮತ್ತು ದಿಲೀಪ್ (20) ಎಂದು ಗುರುತಿಸಲಾಗಿದೆ. ಇವರಲ್ಲಿ ಸಂದೀಪ್ ಕೂಲಿ ಕಾರ್ಮಿಕನಾಗಿದ್ದು, ದಿಲೀಪ್ ಕೆ.ಇ.ಬಿ. ಕಂಟ್ರಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಮದ್ಯದ ಅಮಲಿನಲ್ಲಿ ಈ ರೀತಿ ಪ್ಲೆಕ್ಸ್‌ಗೆ ಬೇಡ್ ಹಾಕಿದ್ದಾರೆ ಎಂದು ಶಂಕಿಸಲಾಗಿದ್ದು, ಬಸವನಹಳ್ಳಿ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
