Tuesday, June 9, 2026
Homeಜಿಲ್ಲಾಸುದ್ದಿಶೃಂಗೇರಿ: KSRTC ಬಸ್ ನ ಸಮಯ ಬದಲಾವಣೆ, ವಿದ್ಯಾರ್ಥಿಗಳಿಗೆ ತೊಂದರೆ: ಅಧಿಕಾರಿಗಳಿಗೆ ಪತ್ರದ ಮೂಲಕ ಮನವಿ!

ಶೃಂಗೇರಿ: KSRTC ಬಸ್ ನ ಸಮಯ ಬದಲಾವಣೆ, ವಿದ್ಯಾರ್ಥಿಗಳಿಗೆ ತೊಂದರೆ: ಅಧಿಕಾರಿಗಳಿಗೆ ಪತ್ರದ ಮೂಲಕ ಮನವಿ!

ಶೃಂಗೇರಿ: ನಿತ್ಯ ಸಂಚರಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸಿನ ಸಮಯ ಬದಲಾವಣೆ ಆಗಿರುವುದರಿಂದ ವಿದ್ಯಾರ್ಥಿಗಳಿಗೆ ಮತ್ತು ಉದ್ಯೋಗ್ಯಸ್ಥರಿಗೆ ಬಹಳ ಅನಾನುಕೂಲ ಆಗಿದ್ದು ದಯವಿಟ್ಟು ಈ ಹಿಂದೆ ಸಂಚರಿಸುತ್ತಿದ್ದ ಸಮಯಕ್ಕೆ ಬಸ್ ಸಂಚರಿಸುವಂತೆ ವಿದ್ಯಾರ್ಥಿಗಳು ಮತ್ತು ಉದ್ಯೋಗ್ಯಸ್ಥರು ಚಿಕ್ಕಮಗಳೂರು ವಿಭಾಗದ ಅಧಿಕಾರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

 

ಈ ಹಿಂದೆ ಶೃಂಗೇರಿಯಿಂದ ಸಂಜೆ 5 ಗಂಟೆಗೆ ಕೆ ಎಸ್ ಆರ್ ಟಿ ಸಿ ಬಸ್ಸು ಹೊರಟು ಜಯಪುರ ಮಾರ್ಗದಲ್ಲಿ ಸಂಚರಿಸುತ್ತಿತ್ತು ಹೀಗಾಗಿ ವಿದ್ಯಾರ್ಥಿಗಳು ಮತ್ತು ಉದ್ಯೋಗಸ್ಥರಿಗೆ ಬಹಳ ಅನುಕೂಲವಾಗುತ್ತಿತ್ತು. ಆದರೆ ಈ ಬಸ್ಸಿನ ಸಮಯದಲ್ಲಿ ಬದಲಾವಣೆಯಾಗಿ ಈಗ ಸಂಜೆ 5.30 ರ ನಂತರ ಹೊರಡುತ್ತಿದ್ದು ವಿದ್ಯಾರ್ಥಿಗಳು ಮತ್ತು ಉದ್ಯೋಗಸ್ಥರು ಬಸ್ಸಿಲ್ಲದೆ ಕಾದು ಕೂರುವ ವಾತಾವರಣ ಸೃಷ್ಟಿಯಾಗಿದೆ.

ಬಹಳಷ್ಟು ವಿದ್ಯಾರ್ಥಿಗಳು ಗ್ರಾಮೀಣ ಭಾಗದಿಂದ ಬರುತ್ತಿದ್ದು ಆಟೋ ಬಾಡಿಗೆ ಮಾಡಿಕೊಂಡು ಸಂಚರಿಸುವ ಪರಿಸ್ಥಿತಿ ಇದೆ ಹಾಗೂ ಕಾಡು ಪ್ರದೇಶಗಳಲ್ಲಿರುವ ಮನೆಗಳಿಗೆ ಒಬ್ಬೊಬ್ಬರೆ ನಡೆದುಕೊಂಡು ಹೋಗುವುದು ಕಷ್ಟಕರವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಹೀಗಾಗಿ ಮೊದಲಿದ್ದ ಸಮಯಕ್ಕೆ ಬಸ್ ಬಿಟ್ಟು ಎಲ್ಲರಿಗೂ ಅನುಕೂಲ ಮಾಡಿಕೊಡಬೇಕು ಎಂಬುದು ವಿದ್ಯಾರ್ಥಿಗಳ ಮತ್ತು ಉದ್ಯೋಗಸ್ಥರ ಕೋರಿಕೆಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!