Thursday, September 10, 2026
Homeಕ್ರೈಮ್ಮಳೆಗಾಲದ ಪ್ರಕೃತಿ ವಿಕೋಪಕ್ಕೆ ಸನ್ನದ್ಧರಾಗಲು ಶೌರ್ಯ ವಿಪತ್ತು ಘಟಕದ ತುರ್ತು ಸಭೆ

ಮಳೆಗಾಲದ ಪ್ರಕೃತಿ ವಿಕೋಪಕ್ಕೆ ಸನ್ನದ್ಧರಾಗಲು ಶೌರ್ಯ ವಿಪತ್ತು ಘಟಕದ ತುರ್ತು ಸಭೆ

Telegram Group
Join Now

ಮೂಡಿಗೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶೌರ್ಯ ವಿಪತ್ತು ಘಟಕದ ಕೋರ್ ಕಮಿಟಿ ಸಭೆಯು ಇಂದು ಮೂಡಿಗೆರೆ ತಾಲೂಕು ಯೋಜನಾ ಕಚೇರಿಯಲ್ಲಿ ನಡೆಯಿತು.

ಮಳೆಗಾಲದ ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳನ್ನು ಸಮರ್ಥವಾಗಿ ಎದುರಿಸಲು ಹಾಗೂ ವಿಪತ್ತು ನಿರ್ವಹಣೆಯಲ್ಲಿ ತೊಡಗಿರುವ ಸ್ವಯಂಸೇವಕರು ಸದಾ ಸನ್ನದ್ಧರಾಗಿರಬೇಕೆಂದು ಸಭೆಯಲ್ಲಿ ಕರೆ ನೀಡಲಾಯಿತು. ತುರ್ತು ಪರಿಸ್ಥಿತಿಗಳಲ್ಲಿ ಜನರ ರಕ್ಷಣೆ, ನೆರವು ಹಾಗೂ ಪರಿಹಾರ ಕಾರ್ಯಗಳಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಕುರಿತು ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಜಿಲ್ಲಾ ನಿರ್ದೇಶಕರಾದ ಸದಾನಂದ ಬಂಗೇರ್, ಚಿತ್ರದುರ್ಗದ ಜನಜಾಗೃತಿ ಯೋಜನಾಧಿಕಾರಿ ನಾಗರಾಜ್ ಕುಲಾಲ್, ಶೌರ್ಯ ವಿಪತ್ತು ಯೋಜನಾಧಿಕಾರಿ ಕಿಶೋರ್, ತಾಲೂಕು ಯೋಜನಾಧಿಕಾರಿ ಬೇಬಿ, ಕ್ಯಾಪ್ಟನ್ ರವಿ, ಜನಜಾಗೃತಿ ವೇದಿಕೆಯ ಸದಸ್ಯ ಸುರೇಶ್ ಶೆಟ್ಟಿ, ತಾಲೂಕಿನ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಘಟಕದ ಪ್ರತಿನಿಧಿಗಳು ಹಾಗೂ ಸ್ವಯಂಸೇವಕರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!