ಬೆಂಗಳೂರು; ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ ದಕ್ಷಿಣಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಪಡೆದರೆ ಗದಗ ಕೊನೆಯ ಸ್ಥಾನ ಪಡೆದಿದೆ. ಇನ್ನು ಈ ಬಾರಿಯೂ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಈ ಬಾರಿ ರಾಜ್ಯದಾದ್ಯಂತ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆದಿತ್ತು. ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದರು. ಇಂದು ಫಲಿತಾಂಶ ಪ್ರಕಟವಾಗಿದ್ದು, ಬೆಳಗ್ಗೆ11 ಗಂಟೆಗೆ ವೆಬ್ ಸೈಟ್ ನಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ವೀಕ್ಷಿಸಬಹುದು.
ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ಪರೀಕ್ಷೆ ನಡೆದಿದ್ದು, ಈ ಬಾರಿ 81.15 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದು, ವಾಣಿಜ್ಯ ವಿದ್ಯಾರ್ಥಿಳು 1.74,315, ಕಲಾವಿಭಾಗದಲ್ಲಿ 1,28, 448, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ.ಪಿಯುಸಿಯಲ್ಲಿ ವಿದ್ಯಾಲಕ್ಷ್ಮಿ ಪ್ರಥಮ ಸ್ಥಾನ ಪಡೆದಿದ್ದು, 600 ಕ್ಕೆ598 ಅಂಕ ಪಡೆದಿದ್ದಾರೆ,
ಮೊಬೈಲ್ ನಲ್ಲಿ ನಿಮ್ಮ ರಿಸಲ್ಟ್ ಹೀಗೆ ನೋಡಿ…
- ನೀವು www.karresults.nic.in ಪಿಯುಸಿಯ ಸಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
- ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ.
- ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಕ್ಲಿಕ್ ಮಾಡ್ಬೇಕು (ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ)
- ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.
- ಈಗ ನೀವು ನಿಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.