ಮೂಡಿಗೆರೆ: ಅಪ್ರಾಪ್ತೆಯೊಬ್ಬಳ ಫೋಟೋಗಳನ್ನು ಮುಂದಿಟ್ಟುಕೊಂಡು ಐವರು ಯುವಕರು ಬ್ಲಾಕ್‌ಮೇಲ್ ಮಾಡಿ ಅತ್ಯಾಚಾರಕ್ಕೆ ಯತ್ನಿಸಿದ ಗಂಭೀರ ಆರೋಪವೊಂದು ಮೂಡಿಗೆರೆ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಪ್ರಕರಣ ವಿರುದ್ಧ ಗೋಣಿಬೀಡು ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಕೇಸ್ ದಾಖಲಾಗಿದೆ.
ಈ ಕೃತ್ಯದಲ್ಲಿ ಭಾಗಿಯಾಗಿದ್ದ ಐವರು ಯುವಕರ ಪೈಕಿ ಕುಶಾ, ನಿತೇಶ್, ಸಚಿನ್ ಹಾಗೂ ಚಂದ್ರಶೇಖರ್ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಹಿಂದೆಯೂ ಪದವಿ ಪೂರ್ವ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬೇಲೂರಿನ ಯುವಕನನ್ನು ಕೆಲ ತಿಂಗಳ ಹಿಂದೆಯೇ ಬಂಧಿಸಿ ಪೊಲೀಸರು ಜೈಲಿಗೆ ಕಳುಹಿಸಿದ್ದರು ಎಂಬ ಸತ್ಯ ಹೊರಬಂದಿದೆ.
