Thursday, July 30, 2026
Homeಕ್ರೈಮ್ಚಿಕ್ಕಮಗಳೂರು: ರಸ್ತೆ ಬದಿ ನಿಂತಿದ್ದ ಎಂಟಕ್ಕೂ ಹೆಚ್ಚು ಕಾರಿನ ಗಾಜು ಹೊಡೆದು ಹಣ ದರೋಡೆ!

ಚಿಕ್ಕಮಗಳೂರು: ರಸ್ತೆ ಬದಿ ನಿಂತಿದ್ದ ಎಂಟಕ್ಕೂ ಹೆಚ್ಚು ಕಾರಿನ ಗಾಜು ಹೊಡೆದು ಹಣ ದರೋಡೆ!

Telegram Group
Join Now

ಚಿಕ್ಕಮಗಳೂರು:  ನಗರದ ತಮಿಳು ಕಾಲೋನಿಯ ಅಕ್ಸ ಮಸೀದಿ ರಸ್ತೆಯಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಎಂಟಕ್ಕೂ ಹೆಚ್ಚು ವಾಹನಗಳ ಗಾಜುಗಳನ್ನು ಪುಡಿಗೈದು, ಒಳಗಿದ್ದ ನಗದನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ತಮಿಳು ಕಾಲೋನಿಯ ಲಾರಿ ಸ್ಟ್ಯಾಂಡ್ ಸಮೀಪದ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ಮಾಲೀಕರು ಮನೆಗೆ ತೆರಳಿದ್ದರು. ಬೆಳಿಗ್ಗೆ ಬಂದು ನೋಡಿದಾಗ ಟಾಟಾ ಏಸ್ ಸೇರಿದಂತೆ ಹಲವು ವಾಹನಗಳ ಮುಂಭಾಗದ ಗಾಜುಗಳು ಜಖಂಗೊಂಡಿರುವುದು ಕಂಡುಬಂದಿದೆ.

ಕಿಡಿಗೇಡಿಗಳು ವಾಹನಗಳ ಗಾಜುಗಳನ್ನು ಒಡೆದು ಮಾತ್ರವಲ್ಲದೆ, ಡ್ಯಾಶ್‌ಬೋರ್ಡ್‌ಗಳನ್ನು ಜಖಂಗೊಳಿಸಿ ಒಳಗಿದ್ದ ಹಣವನ್ನು ದೋಚಿರುವ ಆರೋಪ ಕೇಳಿಬಂದಿದೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments