Tuesday, August 11, 2026
Homeಕ್ರೈಮ್Car overturned: ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಕಾರು ಪಲ್ಟಿ: ಜನಪ್ರಿಯ ಆಸ್ಪತ್ರೆ ಮಾಲೀಕರ ಪುತ್ರ...

Car overturned: ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಕಾರು ಪಲ್ಟಿ: ಜನಪ್ರಿಯ ಆಸ್ಪತ್ರೆ ಮಾಲೀಕರ ಪುತ್ರ ಸೇಫ್!

Telegram Group
Join Now

ಹಾಸನ: ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಕಾರು  ಪಲ್ಟಿಯಾದ ಪರಿಣಾಮ ವೈದ್ಯ ಸಣ್ಣಪುಟ್ಟ ಗಾಯಗೊಂಡು ಪಾರಾಗಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಪಾಳ್ಯ ಬಳಿ ನಡೆದಿದೆ.

ಹಾಸನ ನಗರದ ಜನಪ್ರಿಯ ಆಸ್ಪತ್ರೆ ಮಾಲೀಕ ಹಾಗೂ ವೈದ್ಯ ಅಬ್ದುಲ್ ಬಶೀರ್ ಪುತ್ರ ವೈದ್ಯ ಡಾ.ಶಾರುಖ್ ಅಬ್ದುಲ್ಲಾ ಕಾರು ಚಲಾಯಿಸುತ್ತಿದ್ದರು. ಈ ವೇಳೆ ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದ ಅಪಘಾತ ಸಂಭವಿಸಿದೆ. ಮೂರು ಪಲ್ಟಿ ಹೊಡೆದು ರಸ್ತೆ ಬದಿಗೆ ಕಾರು ಉರುಳಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments