Saturday, June 27, 2026
Homeಕ್ರೈಮ್ಕರ್ನಾಟಕ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಬಾಮಾ ಹರೀಶ್​​ʼಗೆ ಪುತ್ರ ವಿಯೋಗ: ಇತ್ತೀಚೆಗಷ್ಟೆ ನಿಶ್ಚಿತಾರ್ಥ ನಡೆದಿತ್ತು!

ಕರ್ನಾಟಕ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಬಾಮಾ ಹರೀಶ್​​ʼಗೆ ಪುತ್ರ ವಿಯೋಗ: ಇತ್ತೀಚೆಗಷ್ಟೆ ನಿಶ್ಚಿತಾರ್ಥ ನಡೆದಿತ್ತು!

ಶಿವಮೊಗ್ಗ:  ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ, ಕರ್ನಾಟಕ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಬಾಮಾ ಹರೀಶ್​​ ಅವರ ಪುತ್ರ ಉಲ್ಲಾಸ್ ನಿಧನ ಹೊಂದಿದ್ದಾರೆ.

ಶಿವಮೊಗ್ಗದ ಕೊಡಚಾದ್ರಿಗೆ ಗೆಳೆಯರೊಟ್ಟಿಗೆ ಟ್ರೆಕ್ಕಿಂಗ್‌ಗೆ ಹೋಗಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಅವರಿಗೆ ಕೇವಲ 29 ವರ್ಷ ವಯಸ್ಸಾಗಿತ್ತು.ಇತ್ತೀಚೆಗಷ್ಟೆ ನಿಶ್ಚಿತಾರ್ಥವೂ ನಡೆದಿದ್ದು ಡಿಸೆಂಬರ್ ತಿಂಗಳಲ್ಲಿ ಮದುವೆ ನಿಶ್ಚಯವಾಗಿತ್ತು. ಆದರೆ ಇದೀಗ ಹಠಾತ್ತನೆ ಉಲ್ಲಾಸ್ ನಿಧನ ಹೊಂದಿದ್ದಾರೆ. ಅವರ ಮೃತದೇಹವನ್ನು ಬೆಂಗಳೂರಿಗೆ ತರಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments