Thursday, July 2, 2026
Homeಕ್ರೈಮ್Hassan: ಅನಧಿಕೃತವಾಗಿ ದಾಸ್ತಾನು ಮಾಡಿದ್ದ ಬೀಜ & ಸೂಕ್ಷ್ಮ ಪೋಷಕಾಂಶಗಳು ವಶಕ್ಕೆ!

Hassan: ಅನಧಿಕೃತವಾಗಿ ದಾಸ್ತಾನು ಮಾಡಿದ್ದ ಬೀಜ & ಸೂಕ್ಷ್ಮ ಪೋಷಕಾಂಶಗಳು ವಶಕ್ಕೆ!

Telegram Group
Join Now

ಹಾಸನ: ನಗರದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ನಡೆಸಿದ ಪರಿಶೀಲನೆ ವೇಳೆ ಅನಧಿಕೃತವಾಗಿ ದಾಸ್ತಾನು ಮಾಡಲಾಗಿದ್ದ ಬೀಜ ಹಾಗೂ ಸೂಕ್ಷ್ಮ ಪೋಷಕಾಂಶಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹೌದು .. ಹಾಸನ ಜಿಲ್ಲೆಯ ಸಾಲಗಾಮೆ ಹೋಬಳಿಯ ಕೊಂಡಜ್ಜಿಕೊಪ್ಪಲುವಿನ ಕಾರ್ತಿಕ್ ಟ್ರೇಡರ್ಸ್‌ನಲ್ಲಿ ಬೀಜ ಕಾಯ್ದೆ-1966 ಉಲ್ಲಂಘಿಸಿ ಯಾವುದೇ ಅನುಮತಿಯಿಲ್ಲದೆ ದಾಸ್ತಾನು ಮಾಡಲಾಗಿದ್ದ ಸುಮಾರು 85 ಸಾವಿರ ರೂ. ಮೌಲ್ಯದ 180 ಕೆ.ಜಿ. ಹೈಬ್ರೀಡ್ ಮೆಕ್ಕೆಜೋಳ ಬೀಜಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಬೀಜ ಹಾಗೂ ರಸಗೊಬ್ಬರ ಮಾರಾಟಗಾರರು ನಿಯಮಬಾಹಿರವಾಗಿ ಚಟುವಟಿಕೆ ನಡೆಸುತ್ತಿರುವುದು ಕಂಡುಬಂದರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಇಲಾಖೆ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments