ಚಿಕ್ಕಮಗಳೂರು : ನಗರದ ಹೃದಯ ಭಾಗದಲ್ಲಿರೋ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮಧ್ಯಾಹ್ನ 1.30ರಿಂದ 3.30ರ ಒಳಗೆ ಬ್ಲಾಸ್ಟ್ ಮಾಡ್ತೀವಿ ಅಂತ ನ್ಯಾಯಾಲಯದ ಇ-ಮೇಲ್ ಗೆ ಬಂದಿರೋ ಸಂದೇಶವಾಗಿದೆ.
ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಬಾಂಬ್ ನಿಷ್ಕ್ರಿಯ ದಳ ತಪಾಸಣೆ ನಡೆಸಿತು. ಪ್ರಸ್ತುತ ಭದ್ರತೆ ಹೆಚ್ಚಿಸಲಾಗಿದ್ದು, ಇ-ಮೇಲ್ ಮೂಲ ಪತ್ತೆಗೆ ತನಿಖೆ ಆರಂಭವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸ್ಥಳಕ್ಕೆ ದೌಡಾಯಿಸಿ, ಇಡೀ ಕೋರ್ಟ್ ಆವರಣವನ್ನು ತಪಾಸಣೆ ನಡೆಸಿದ್ದರು. ಈ ವೇಳೆ ನ್ಯಾಯಾಲಯದ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
