Thursday, July 2, 2026
Homeಜಿಲ್ಲಾಸುದ್ದಿDog Attack: ಹಾಸನದಲ್ಲಿ ಸಿಕ್ಕ ಸಿಕ್ಕವರ ಮೇಲೆ ಹುಚ್ಚುನಾಯಿ ದಾಳಿ: ಇಬ್ಬರು ಮಕ್ಕಳು ಸೇರಿ 8...

Dog Attack: ಹಾಸನದಲ್ಲಿ ಸಿಕ್ಕ ಸಿಕ್ಕವರ ಮೇಲೆ ಹುಚ್ಚುನಾಯಿ ದಾಳಿ: ಇಬ್ಬರು ಮಕ್ಕಳು ಸೇರಿ 8 ಮಂದಿ ಗಾಯ

Telegram Group
Join Now

ಹಾಸನ: ಸಿಕ್ಕ ಸಿಕ್ಕವರ ಮೇಲೆ ಹುಚ್ಚುನಾಯಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಅರಕಲಗೂಡಿನ ಉಳ್ಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹುಚ್ಚುನಾಯಿಯ ದಾಳಿಯಿಂದ ಇಬ್ಬರು ಮಕ್ಕಳು ಸೇರಿ 8 ಮಂದಿ ಗಾಯಗೊಂಡಿದ್ದಾರೆ.

ರಾಜು, ರಘು, ಅಂಜಲಿ, ಮಂಜಯ್ಯ ಹಾಗೂ ಇಬ್ಬರು ಮಕ್ಕಳು ಸೇರಿದಂತೆ 8 ಜನರಿಗೆ ಹುಚ್ಚುನಾಯಿ ಕಚ್ಚಿ ಗಾಯಗೊಳಿಸಿದೆ. ಗಾಯಾಳುಗಳಿಗೆ ಕೊಣನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹುಚ್ಚುನಾಯಿ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments