Saturday, July 4, 2026
Homeಗ್ರೇಟರ್ ಬೆಂಗಳೂರುGruha Jyothi Scheme: ಗೃಹ ಜ್ಯೋತಿ ಪರಿಶೀಲನೆ ವೇಳೆ ಜಾತಿ ಮಾಹಿತಿ ಕಡ್ಡಾಯವಲ್ಲ: ಬೆಸ್ಕಾಂ ಸ್ಪಷ್ಟನೆ

Gruha Jyothi Scheme: ಗೃಹ ಜ್ಯೋತಿ ಪರಿಶೀಲನೆ ವೇಳೆ ಜಾತಿ ಮಾಹಿತಿ ಕಡ್ಡಾಯವಲ್ಲ: ಬೆಸ್ಕಾಂ ಸ್ಪಷ್ಟನೆ

Telegram Group
Join Now

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಪರಿಶೀಲನೆ ವೇಳೆ ಜಾತಿ ವಿವರ ನೀಡುವುದು ಕಡ್ಡಾಯವಲ್ಲ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ತಿಳಿಸಿದೆ.

ಜುಲೈ 1 ರಿಂದ ರಾಜ್ಯಾದ್ಯಂತ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಬೆಸ್ಕಾಂ ಸಿಬ್ಬಂದಿ ಹಾಗೂ ಮೀಟರ್ ರೀಡರ್‌ಗಳು ಸೇವಾ ಸಿಂಧು ಮೊಬೈಲ್ ಅಪ್ಲಿಕೇಷನ್ ಮತ್ತು ಮುದ್ರಿತ ಘೋಷಣಾ ಪತ್ರದ ಮೂಲಕ ಈ ವಿವರಗಳನ್ನು ಕಲೆ ಹಾಕುತ್ತಿದ್ದಾರೆ.

ಈ ವೇಳೆ ಫಲಾನುಭವಿಯ ಪ್ರವರ್ಗ (ಜಾತಿ ಪ್ರಮಾಣಪತ್ರ) ಹಾಗೂ ಉಪಜಾತಿಯ ವಿವರಗಳನ್ನು ಕಡ್ಡಾಯವಾಗಿ ಕೇಳಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆದು, ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments