ಮೂಡಿಗೆರೆ: ಕಾಫಿನಾಡು ಮಲೆನಾಡು ಭಾಗದಲ್ಲಿ ಗಾಳಿ ಮಳೆ ಅಬ್ಬರ ಜೊರಾಗಿದ್ದು ಬಾರಿ ಗಾಳಿ-ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ ಹಾಗೆ ಮತ್ತೊಂದೆಡೆ ಮರ ಬಿದ್ದು ಮನೆ ಸಂಪೂರ್ಣ ಜಖಂ ಆಗಿರುವ ಘಟನೆ ಮೂಡಿಗೆರೆ ತಾಲೂಕಿನ ಬಕ್ಕಿ ಗ್ರಾಮದ ಬಳಿ ನಡೆದಿದೆ.
ಹೌದು .. ಬೆಟ್ಟಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳೂರು ಗ್ರಾಮದ ಬಡವನದಿಣ್ಣೆ ನಿವಾಸಿ ಸಿದ್ದಪ್ಪ ಅವರ ಮನೆಗೆ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಬೃಹತ್ ಮರ ಬಿದ್ದು ಸಂಪೂರ್ಣ ಹಾಲಿ ಆಗಿದೆ.ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬೆಟ್ಟಗೆರೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹಾನಿಯ ಮೌಲ್ಯ ಮಾಪನ ಕ್ರಮ ಕೈಗೊಂಡಿದ್ದಾರೆ. ಹಾಗೆ ಸಂತ್ರಸ್ತರ ಕುಟುಂಬಕ್ಕೆ ಸರ್ಕಾರದಿಂದ ಸೌಲಭ್ಯ ಒದಗಿಸಲು ಅಲ್ಲಿನ ಸ್ಥಳೀಯರು ಆಗ್ರಹಿಸಿದ್ದಾರೆ,
