ಹಾಸನ : ಜಿಲ್ಲೆಯಾದ್ಯಂತ ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯಾದ ಹಿನ್ನೆಲೆಯಲ್ಲಿ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಸಕಲೇಶಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಎಂದು ತಹಶೀಲ್ದಾರ್ ಸುಪ್ರಿತಾ ಆದೇಶ ನೀಡಿದ್ದಾರೆ
ಹಾಗೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಂದು ಶಾಲೆಗಳಿಗೆ ತಾಲೂಕು ಆಡಳಿತ ರಜೆ ಘೋಷಣೆ ಮಾಡಿದೆ ಎಂದು ಸಕಲೇಶಪುರ ಉಪ ವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ತಿಳಿಸಿದ್ದಾರೆ.
