ಮೂಡಿಗೆರೆ: ಕಾಫಿನಾಡ ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಆರ್ಭಟ ಚುರುಕಾಗಿದ್ದು ಮೂಡಿಗೆರೆ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ ಸುರಿಯುತ್ತಿದೆ. ಜನಜೀವನ ತುಂಬಾ ಅಸ್ತವ್ಯಸ್ತಗೊಂಡಿದ್ದು ಮಲೆನಾಡಿನ ಜನರಲ್ಲಿ ಆತಂಕ ಉಂಟು ಮಾಡಿದೆ. ಹಾಗೆ ತಾಲೂಕಿನ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ಇಂದು( ಸೋಮವಾರ) ರಜೆ ಘೋಷಣೆ ಮಾಡಲಾಗಿದೆ.
ಹೌದು ..ಹಾಗೆ ಭಾರೀ ಮಳೆ ಮತ್ತು ಗಾಳಿಯ ಆರ್ಭಟಕ್ಕೆ ಚಾರ್ಮಾಡಿ ಘಾಟಿ ರಸ್ತೆಗೆ ಮರಗಳು ಉರುಳಿಬಿದ್ದಿದ್ದು, ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಮಳೆಯ ಸಮಯದಲ್ಲಿ ಘಾಟಿ ಪ್ರದೇಶಗಳಲ್ಲಿ ಮರಗಳು ಮತ್ತು ಬಂಡೆಗಳು ಕುಸಿಯುವ ಸಾಧ್ಯತೆ ಇರುವುದರಿಂದ, ಚಾರ್ಮಾಡಿ ಘಾಟ್ನಲ್ಲಿ ಸಂಚರಿಸುವವರು ಹೆಚ್ಚಿನ ಜಾಗರೂಕತೆ ವಹಿಸುವುದು ಅವಶ್ಯಕತೆ ಎಂದು ಸ್ಥಳೀಯರು ತಿಳಿಸಿದ್ದಾರೆ.
