Tuesday, July 7, 2026
Homeಜಿಲ್ಲಾಸುದ್ದಿSchools Holiday: ಮಲೆನಾಡು ಭಾಗದಲ್ಲಿ ಭಾರೀ ಮಳೆ: 5 ತಾಲೂಕುಗಳ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ

Schools Holiday: ಮಲೆನಾಡು ಭಾಗದಲ್ಲಿ ಭಾರೀ ಮಳೆ: 5 ತಾಲೂಕುಗಳ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ

Telegram Group
Join Now

ಚಿಕ್ಕಮಗಳೂರು: ಕಾಫಿನಾಡು ಮಲೆನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ 5 ತಾಲೂಕುಗಳಲ್ಲಿನ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಇಂದು (ಮಂಗಳವಾರ) ರಜೆ ಘೋಷಣೆ ಮಾಡಲಾಗಿದೆ.

ಕೊಪ್ಪ, ಶೃಂಗೇರಿ, ಮೂಡಿಗೆರೆ, ಕಳಸ, ಎನ್‌ .ಆರ್.ಪುರ ತಾಲೂಕುಗಳಲ್ಲಿನ ಶಾಲೆ, ಅಂಗನವಾಡಿಗಳಿಗೆ ರಜೆ  ಘೋಷಿಸಿ ಆಯಾ ತಾಲೂಕು ಆಡಳಿತ ಆದೇಶಿಸಿವೆ

ಸೋಮವಾರದಿಂದಲೂ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಮಕ್ಕಳ ಸುರಕ್ಷತೆ, ಮುನ್ನೆಚ್ಚರಿಕೆ ಕ್ರಮವಾಗಿ ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಅವತಿ, ವಸ್ತಾರೆ, ಆಲ್ದೂರು ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆಯಾ ತಾಲೂಕು ಆಡಳಿತದಿಂದ ಇಂದು ಒಂದು ದಿನ ಮಾತ್ರ ರಜೆ ಘೋಷಣೆ ಮಾಡಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments