ಹಾಸನ: ಜಿಲ್ಲೆಯ ಸಕಲೇಶಪುರ, ಬೇಲೂರು, ಆಲೂರು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದ್ದು, ಬೇಲೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಬೇಲೂರು ತಾಲೂಕಿನ ಅರೇಹಳ್ಳಿ, ಬಿಕ್ಕೋಡು, ಚೀಕನಹಳ್ಳಿ ಹೋಬಳಿಗಳು ಹಾಗೂ ಕಸಬಾ ಎ, ಕಸಬಾ ಬಿ ವಲಯದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ಬೇಲೂರು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಆದೇಶ ಹೊರಡಿಸಿದ್ದಾರೆ.
ಈ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ.
