ಮೂಡಿಗೆರೆ: ಕಾಫಿನಾಡ ಮಲೆನಾಡು ಭಾಗದಲ್ಲಿ ಮುಂದುವರೆದ ಗಾಳಿ ಮಳೆ ಅಬ್ಬರ ಮೂಡಿಗೆರೆ ತಾಲೂಕಿನ ಸುತ್ತಮುತ್ತ ಧಾರಾಕರ ಮಳೆಯಾಗಿದ್ದು ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿ ಘಾಟ್ ತಪ್ಪಲಿನಲ್ಲಿ ಭಾರೀ ಮಳೆಯಾಗಿದೆ.
ಬೆಳಗ್ಗೆಯಿಂದ ಒಂದೇ ಸಮನೆ ಸುರಿಯುತ್ತಿರೋ ಮಳೆಗೆ ಜನಜೀವನ ಹೈರಾಣಾಗಿದ್ದು ಭಾರಿ ಗಾಳಿ-ಮಳೆಗೆ ಮನೆಯೊಂದರ ಪಕ್ಕದ ಧರೆ ಕುಸಿದ ಘಟನೆ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದಲ್ಲಿ ನಡೆದಿದೆ.
ಹೌದು .. ದೇವನಗೂಲ್ ಗ್ರಾಮದ ಇಂದಿರಮ್ಮ ಅವರಿಗೆ ಸೇರಿದ ಮನೆಯ ಪಕ್ಕದಲ್ಲಿ ಭೂ ಕುಸಿತ ಸಂಭವಿಸಿದ್ದು, ಹಾಗೆ ಪ್ರತಾಪ್ ಎಂಬುವರ ಮನೆ ಮೇಲೆ ಮರ ಬಿದ್ದಿದೆ. ನಿರಂತರ ಮಳೆಯಿಂದ ಧರೆ ಮತ್ತಷ್ಟು ಕುಸಿಯುತ್ತಿರುವ ಕಾರಣ ಕುಟುಂಬದವರು ಆತಂಕದಲ್ಲಿದ್ದಾರೆ.
ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
