Wednesday, July 8, 2026
Homeಗ್ರೇಟರ್ ಬೆಂಗಳೂರುStreet Vendors Strike: ಸರ್ಕಾರದ ವಿರುದ್ಧ ಸಿಡಿದೆದ್ದಿರೋ ಬೀದಿ ಬದಿ ವ್ಯಾಪಾರಿಗಳು: ಇಂದು ಬೃಹತ್ ಹೋರಾಟಕ್ಕೆ...

Street Vendors Strike: ಸರ್ಕಾರದ ವಿರುದ್ಧ ಸಿಡಿದೆದ್ದಿರೋ ಬೀದಿ ಬದಿ ವ್ಯಾಪಾರಿಗಳು: ಇಂದು ಬೃಹತ್ ಹೋರಾಟಕ್ಕೆ ಕರೆ

Telegram Group
Join Now

ಬೆಂಗಳೂರು: ಸರ್ಕಾರದ ವಿರುದ್ಧ ಸಿಡಿದೆದ್ದಿರೋ ಬೀದಿ ಬದಿ ವ್ಯಾಪಾರಿಗಳು ತೆರವು ಕಾರ್ಯ ನಿಲ್ಲಿಸುವಂತೆ ಒತ್ತಾಯಿಸಿ ಇಂದು ಬಂದ್‌ಗೆ ಕರೆ ಕೊಟ್ಟಿದ್ದಾರೆ. ವ್ಯಾಪಾರ ವಹಿವಾಟು ಸ್ತಬ್ಧಗೊಳಿಸಿ ಹೋರಾಟಕ್ಕೆ ಮುಂದಾಗಿದ್ದಾರೆ.

ಫುಟ್‌ಪಾತ್  ಒತ್ತುವರಿ ತೆರವಿನ ವಿರುದ್ಧ ಸಿಡಿದೆದ್ದಿರೋ ಬೀದಿಬದಿ ವ್ಯಾಪಾರಿಗಳು, ಕೂಡಲೇ ಸರ್ಕಾರ ಆದೇಶ ಹಿಂಪಡೆದು, ತೆರವು ಕಾರ್ಯ ನಿಲ್ಲಿಸುವಂತೆ ಒತ್ತಾಯಿಸಿ ಇಂದು ಬೃಹತ್ ಹೋರಾಟಕ್ಕೆ ಕರೆ ಕೊಟ್ಟಿದ್ದಾರೆ. ಹೀಗಾಗಿ ಇಂದು ತಮ್ಮ ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ.

ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಜಿಬಿಎ ಕೈಗೊಂಡಿರುವ ಕ್ಲೀನ್ ಫುಟ್‌ಪಾತ್ ಕಾರ್ಯಾಚರಣೆ ಬೀದಿ ಬದಿ ವ್ಯಾಪಾರಿಗಳ ನಿದ್ದೆಗೆಡಿಸಿದೆ. ಜೀವನೋಪಾಯಕ್ಕೆ ಕಾರ್ಯಾಚರಣೆ ತೊಂದರೆ ಎಂಬ ಕಾರಣಕ್ಕೆ ಜಿಬಿಎ ವಿರುದ್ಧ ಸಿಡಿದೆದ್ದಿರುವ ವ್ಯಾಪಾರಿಗಳು ಇಂದು ಹೋರಾಟದ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ತಯಾರಿ ಮಾಡಿಕೊಂಡಿವೆ. ಇಂದು ತಮ್ಮ ವ್ಯಾಪಾರ ವಹಿವಾಟುಗಳನ್ನ ಬಂದ್ ಮಾಡಲು ನಿರ್ಧಾರ ಮಾಡಿದ್ದು, ಫ್ರೀಡಂ ಪಾರ್ಕ್‌ನಲ್ಲಿ ಹೋರಾಟಕ್ಕೆ ಮುಂದಾಗಿದ್ದಾರೆ.

ನಗರದ ಪ್ರಮುಖ ಮಾರುಕಟ್ಟೆಗಳಾದ ಕೆ.ಆರ್ ಮಾರ್ಕೆಟ್, ಸಾರಕ್ಕಿ ಮಾರ್ಕೆಟ್, ಜಯನಗರ ಮಾರ್ಕೆಟ್, ಗಾಂಧಿ ಬಜಾರ್, ಬನಶಂಕರಿ, ಮಲ್ಲೇಶ್ವರ, ಮಹದೇವಪುರ, ಆರ್ ಆರ್ ನಗರ ಸೇರಿದಂತೆ ಹಲವು ಕಡೆ ಬೆಳಗ್ಗೆಯಿಂದಲೇ ವ್ಯಾಪಾರಿಗಳು ತಮ್ಮ ವ್ಯಾಪಾರ ನಿಲ್ಲಿಸಲು ನಿರ್ಧರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments