ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ಸಾಗಿಸುತ್ತಿದ್ದ ಲಾರಿ ಹಾಗೂ ಬೊಲೆರೋ ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೊಲೆರೋ ವಾಹನದಲ್ಲಿದ್ದ ನಾಲ್ವರು ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪ ನಡೆದಿದೆ.
ಹೌದು.. ಮಂಗಳೂರಿನಿಂದ ಹಿರೇಬೈಲ್ ಕಡೆಗೆ ತೆರಳುತ್ತಿದ್ದ ಬೊಲೆರೋ ವಾಹನ ಅಪಘಾತಕ್ಕೀಡಾಗಿದ್ದು, ಗಾಯಗೊಂಡವರನ್ನು ಸ್ಥಳೀಯರ ನೆರವಿನಿಂದ ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಅಪಘಾತದಿಂದ ಬಾಳೂರು–ಕಳಸ ಮುಖ್ಯರಸ್ತೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಸ್ಥಳೀಯರು ನೆರವಿನಿಂದ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು.
ಘಟನೆ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
