Sunday, July 12, 2026
Homeಬ್ರೇಕಿಂಗ್ ನ್ಯೂಸ್S Janaki Passes Away: ಖ್ಯಾತ ಗಾಯಕಿ ಎಸ್‌.ಜಾನಕಿ ನಿಧನ: ಹಾಡು ನಿಲ್ಲಿಸಿದ ಕನ್ನಡಿಗರ ಹೆಮ್ಮೆಯ...

S Janaki Passes Away: ಖ್ಯಾತ ಗಾಯಕಿ ಎಸ್‌.ಜಾನಕಿ ನಿಧನ: ಹಾಡು ನಿಲ್ಲಿಸಿದ ಕನ್ನಡಿಗರ ಹೆಮ್ಮೆಯ ಗಾನ ಕೋಗಿಲೆ

Telegram Group
Join Now

ಖ್ಯಾತ ಗಾಯಕಿ ಎಸ್‌.ಜಾನಕಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೈಸೂರಿನ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಮಗ ಮೃತಪಟ್ಟ ಬಳಿಕ ಮೈಸೂರಿನ ಬೋಗಾದಿಯ ಆಪ್ತರ ಮನೆಯಲ್ಲಿ ಎಸ್‌.ಜಾನಕಿ ಅವರು ವಾಸವಾಗಿದ್ದರು ಎಂದು ಮೂಲಗಳು ತಿಳಿಸಿವೆ.

80ರ ದಶಕದಲ್ಲಿ ʼಜಾನಕಮ್ಮʼ ಜನಪ್ರಿಯತೆ ಗಳಿಸಿದ್ದರು. ʼಭಾರತದ ನೈಟಿಂಗೇಲ್‌ʼ ಅಂತಲೇ ಹೆಸರುವಾಸಿಯಾಗಿದ್ದರು. ಸುಮಾರು 48 ಸಾವಿರ ಗೀತೆಗಳನ್ನು ಹಾಡಿದ್ದರು. ಆಂಧ್ರಪ್ರದೇಶದಲ್ಲಿ ಜನಿಸಿದ್ದರೂ ಕರ್ನಾಟಕದ ಮೇಲೆ ವಿಶೇಷ ಪ್ರೀತಿ ಹೊಂದಿದ್ದರು. ಅಲ್ಲದೇ, ಕನ್ನಡದಲ್ಲೇ ಹೆಚ್ಚು ಹಾಡುಗಳನ್ನು ಹಾಡಿದ್ದರು. 4 ರಾಷ್ಟ್ರೀಯ ಪ್ರಶಸ್ತಿ, 33 ವಿವಿಧ ರಾಜ್ಯ ಪ್ರಶಸ್ತಿ, ಮೈಸೂರು ವಿವಿ ಗೌರವ ಡಾಕ್ಟರೇಟ್‌, ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಪಲ್ಲಪಟ್ಲ ಗ್ರಾಮದಲ್ಲಿ ಜನಿಸಿದ ಎಸ್.ಜಾನಕಿ ಅವರಿಗೆ ಬಾಲ್ಯದಿಂದಲೇ ಸಂಗೀತದ ಮೇಲೆ ವಿಶೇಷ ಆಸಕ್ತಿ ಇತ್ತು. ಯಾವುದೇ ಔಪಚಾರಿಕ ಸಂಗೀತ ಶಿಕ್ಷಣವಿಲ್ಲದಿದ್ದರೂ, ತಮ್ಮ ಸಹಜ ಪ್ರತಿಭೆ ಮತ್ತು ನಿರಂತರ ಅಭ್ಯಾಸದಿಂದ ಅವರು ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ ಹಿನ್ನೆಲೆ ಗಾಯಕಿಯಾಗಿ ಹೊರಹೊಮ್ಮಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments