Sunday, July 12, 2026
Homeಕರ್ನಾಟಕS.Janaki: ಎಸ್.ಜಾನಕಿ ಇಚ್ಛೆಯಂತೆ ಮೈಸೂರಿನಲ್ಲೇ ಅಂತ್ಯಕ್ರಿಯೆ: ಮೊಮ್ಮಗಳಿಂದ ಅಂತ್ಯಸಂಸ್ಕಾರ

S.Janaki: ಎಸ್.ಜಾನಕಿ ಇಚ್ಛೆಯಂತೆ ಮೈಸೂರಿನಲ್ಲೇ ಅಂತ್ಯಕ್ರಿಯೆ: ಮೊಮ್ಮಗಳಿಂದ ಅಂತ್ಯಸಂಸ್ಕಾರ

Telegram Group
Join Now

ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮೈಸೂರಿನಲ್ಲಿ ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ ನಡೆಯಲಿದೆ.

ಮೊಮ್ಮಗಳು ಅಪ್ಸರಾ ಅವರಿಂದ ಎಸ್.ಜಾನಕಿ ಅವರ ಅಂತ್ಯಸಂಸ್ಕಾರ ನೆರವೇರಲಿದೆ. ಕೆಲ ವರ್ಷಗಳ ಹಿಂದೆ ಜಾನಕಿ ಅವರ ಪುತ್ರ ನಿಧನರಾದರು. ಹೀಗಾಗಿ, ಅವರ ಮಗನ ಮಗಳಿಂದ ಗಾಯಕಿಯ ಅಂತ್ಯಸಂಸ್ಕಾರ ನಡೆಯಲಿದೆ. ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ,  ಬೆಳಗ್ಗೆ 8 ಗಂಟೆಯಿಂದ ಮಹಾರಾಜ ಕಾಲೇಜು ಮೈದಾನದಲ್ಲಿ ಅಂತಿಮ ನಮನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು. ಸಂಜೆ ವೇಳೆಗೆ ಮೈಸೂರು ತಾಲೂಕಿನ ಕಣಿಯನ ಹುಂಡಿ ನವೀನ್ ಫಾರಂ ಹೌಸ್‌ನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments