ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ದಾರುಣ ಘಟನೆ ಸಂಭವಿಸಿದ್ದು, ಮದುವೆಯಾಗಿ ಕೇವಲ ನಾಲ್ಕು ತಿಂಗಳಾಗಿದ್ದ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿಕ್ಕಮಗಳೂರು ಮೂಲದ ಶ್ವೇತಾ (25) ಮೃತಪಟ್ಟ ದುರ್ದೈವಿ. ಇವರು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ವಾಸವಾಗಿದ್ದರು ಹಾಗೂ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಮೃತ ಶ್ವೇತಾ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿದ ಯುವಕನ ಕೈಹಿಡಿದು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, ವೈವಾಹಿಕ ಜೀವನ ಆರಂಭವಾದ ಕೆಲವೇ ತಿಂಗಳುಗಳಲ್ಲಿ ಈ ಘಟನೆ ನಡೆದಿರುವುದು ತೀವ್ರ ಆಘಾತವನ್ನುಂಟು ಮಾಡಿದೆ.ನನ್ನ ಗಂಡ ಹಾಗೂ ನನ್ನ ಗಂಡನ ಅಕ್ಕನನ್ನ ಸುಮ್ಮನೆ ಬಿಡಬೇಡಿ.ಅವರಿಗೆ ತಕ್ಕ ಪಾಠ ಕಲಿಸಿ ಅಂತ ಡೆತ್ ನೋಟ್ ಕೂಡ ಬರೆದಿದ್ದಾಳೆ.
ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
