ಕೊಪ್ಪ: ವಿಶ್ವನಾಥ್ ಗದ್ದೆಮನೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಲೆನಾಡ ಗಾಂಧಿ ಹೆಚ್ ಜಿ ಗೋವಿಂದೇಗೌಡರ ಜನ್ಮ ಶತಮಾನೋತ್ಸವ ಸ್ಮರಣಾರ್ಥ ಶೃಂಗೇರಿ ಕ್ಷೇತ್ರದಾದ್ಯಂತ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿ ಶಾಲೆಗೆ ಟಾಪರ್ ಆದ ವಿದ್ಯಾರ್ಥಿಗಳಿಗೆ ಹಾಗೂ ಕ್ಷೇತ್ರದಲ್ಲಿ ಯಾವೆಲ್ಲ ಶಾಲೆ 100% ಫಲಿತಾಂಶಗಳಿಸುವಲ್ಲಿ ಶ್ರಮಿಸಿದ ಸರ್ಕಾರಿ ಶಾಲಾ ಬೋಧಕ ಸಿಬ್ಬಂದಿಗಳಿಗೆ ಗೌರವ ಸಮರ್ಪಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ದಿವ್ಯ ಕ್ಷೇತ್ರ ಹರಿಹರಪುರದ ಜಗದ್ಗುರು ಶ್ರೀ ಸಚ್ಚಿದಾನಂದ ಸರಸ್ವತೀ ಮಹಾಸ್ವಾಮಿಗಳ ದಿವ್ಯ ಸಾನಿಧ್ಯವಿತ್ತು ಹಾಗೂ ವಿಶ್ವನಾಥ್ ಗದ್ದೆಮನೆ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ವಿಶ್ವನಾಥ್ ಗದ್ದೆಮನೆ,ಹೆಚ್ ಜಿ ಗೋವಿಂದೇ ಗೌಡರ ಪುತ್ರ ಹೆಚ್ ಜಿ ವೆಂಕಟೇಶ್,ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ ಗೌರವಾಧ್ಯಕ್ಷರಾದ ರಾಮಸ್ವಾಮಿ ಶೆಟ್ಟಿಗದ್ದೆ, ಪತ್ರಕರ್ತ ರವಿ ಸೇರಿದಂತೆ ಶೃಂಗೇರಿ,ಕೊಪ್ಪ,ಎನ್ ಆರ್ ಪುರ ಮೂರೂ ತಾಲೂಕಿನ ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ತಾಲೂಕು ಅಧ್ಯಕ್ಷರುಗಳು ಹಾಜರಿದ್ದರು.

ಕಾರ್ಯಕ್ರಮದಲ್ಲಿ ವಿಶ್ವನಾಥ್ ಗದ್ದೆಮನೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕ್ಷೇತ್ರದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೀಡುವ ಒಂದು ಜೊತೆ ಸಮವಸ್ತ್ರ,ಟ್ರಾಕ್ ಸೂಟ್,ಬ್ಯಾಗ್‌ನ್ನು ಸಾಂಕೇತಿಕವಾಗಿ ಹರಿಹರಪುರ ಜಗದ್ಗುರುಗಳ ವಿತರಿಸಿ ಅಭಿಯಾನಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ವಿಶ್ವನಾಥ್ ಗದ್ದೆಮನೆ ಕಾರ್ಯಕ್ರಮದ ಉದ್ದೇಶ ತಿಳಿಸುವುದರೊಂದಿಗೆ, ವಿದ್ಯಾರ್ಥಿಗಳು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದಂತೆ ಕರೆ ನೀಡಿದರು. ನಂತರ ಆಶೀರ್ವಚನ ನೀಡಿದ ಜಗದ್ಗುರುಗಳು ವಿಶ್ವನಾಥ್ ಗದ್ದೆಮನೆ ಚಾರಿಟೇಬಲ್ ಟ್ರಸ್ಟ್ ನಡೆಸುತ್ತಿರುವ ಸಾಮಾಜಿಕ ಕಾರ್ಯವನ್ನು ಶ್ಲಾಘಿಸಿದರು ಹಾಗೂ ಹೆಚ್ ಜಿ ಗೋವಿಂದೇಗೌಡರ ಜನ್ಮ ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಒಂದು ದಿನ ಹರಿಹರಪುರ ಮಠದಲ್ಲಿ ಕಾರ್ಯಕ್ರಮ ಆಯೋಜನೆ ಮಾಡುವುದಾಗಿ, ಆ ಕಾರ್ಯಕ್ರಮಕ್ಕೆ ಎಲ್ಲರೂ ಬರುವಂತೆ ಕರೆನೀಡಿದರು
