ಬೆಂಗಳೂರು: ದೇವೇಗೌಡರ ಪತ್ನಿ ಚೆನ್ನಮ್ಮ ಆರಾಮಾಗಿದ್ದಾರೆ, ತಕ್ಕಮಟ್ಟಿಗೆ ಸುಧಾರಿಸಿಕೊಂಡಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯ ಡಾ.ಸತ್ಯ ನಾರಾಯಣ ಮೈಸೂರು ತಿಳಿಸಿದ್ದಾರೆ.
ಚೆನ್ನಮ್ಮ ಅವರು ಉಸಿರಾಟದ ತೊಂದರೆ, ಚೆಸ್ಟ್ ಕನ್ಜೆಕ್ಷನ್ ಅಂತ ಬಂದಿದ್ದರು. ಸದ್ಯ ಆರಾಮಾಗಿದ್ದಾರೆ. ತಕ್ಕ ಮಟ್ಟಿಗೆ ಸುಧಾರಿಸಿಕೊಂಡಿದ್ದಾರೆ. ಎರಡು ದಿನದಲ್ಲಿ ಡಿಸ್ಚಾರ್ಜ್ ಮಾಡೋ ಪ್ಲ್ಯಾನ್ ಒದೆ. ಸ್ವಲ್ಪ ಆಕ್ಸಿಜನ್ ಏರುಪೇರು ಇರೋದ್ರಿಂದ ಐಸಿಯುನಲ್ಲಿ ಅಡ್ಮಿಟ್ ಮಾಡಿದ್ದೇವೆ. ಅದರ ಹೊರತಾಗಿ ಯಾವುದೇ ಗಂಭೀರ ಪರಿಸ್ಥಿತಿ ಇಲ್ಲ ಎಂದಿದ್ದಾರೆ.
ಚೇತರಿಸಿಕೊಳ್ಳುವ ಎಲ್ಲಾ ಲಕ್ಷಣಗಳು ಇವೆ. ಡಾ.ಮಂಜುನಾಥ್, ದೇವೇಗೌಡರು ರಾತ್ರಿ ಬಂದಿದ್ದರು. ಹೆಚ್‌ಡಿ ಕುಮಾರಸ್ವಾಮಿ ಅವರು ನನ್ನ ಜೊತೆ ಮಾತಾಡಿದ್ದಾರೆ. ಉಸಿರಾಟದ ಸಮಸ್ಯೆ ಈಗ ಕಮ್ಮಿಯಾಗಿದೆ ಎಂದು ಹೇಳಿದ್ದಾರೆ.
ಬುಧವಾರ ರಾತ್ರಿ (ಜು.15) 10 ಗಂಟೆ ಬಳಿಕ ಆರೋಗ್ಯದಲ್ಲಿ ಏರುಪೇರಾಗಿದೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆ ದೇವೇಗೌಡರ ಪತ್ನಿ ಚೆನ್ನಮ್ಮ (Chenamma) ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
