ಹುಬ್ಬಳ್ಳಿ- ಧಾರವಾಡ; ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಪುತ್ರಿ ನೇಹಾ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನು ನೇಹಾ ಹತ್ಯೆ ಖಂಡಿಸಿ ಹುಬ್ಬಳ್ಳಿ ವ್ಯಾಪ್ತಿಯ ಕಾಲೇಜುಗಳನ್ನು ಬಂದ್ ಮಾಡಿ ಆರೋಪಿ ಫಯಾಜ್ ನನ್ನು ಎನ್ಕೌಂಟರ್ ಮಾಡುವಂತೆ ಎಬಿವಿಪಿ ಸೇರಿದಂತೆ ಅನೇಕ ವಿದ್ಯಾರ್ಥಿ ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸುತ್ತಿವೆ.
ಇನ್ನು ನೇಹಾ ಪಾರ್ಥಿವ ಶರೀರವನ್ನು ಮನೆಯ ಬಳಿ ಇಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಾಂಗ್ರೆಸ್ ಸದಸ್ಯ ನಿರಂಜನಯ್ಯ ಹಿರೇಮಠ ಕುಟುಂಬಸ್ಥರ ಹಾಗೂ ನೇಹಾ ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿದೆ.
ನೇಹಾ ಹತ್ಯೆ ಘಟನೆ; ನೇಹಾ ಗುರುವಾರ ಸಂಜೆ ಕ್ಲಾಸ್ ಮುಗಿಸಿಕೊಂಡು ಮನೆಗೆ ಹಿಂತಿರುಗಿತ್ತಿದ್ದಾಗ ಕಾಲೇಜು ಕ್ಯಾಂಪಸ್ ಒಳಗೆ ಫಯಾಜ್ ಮಾಸ್ಕ್ ಹಾಕಿಕೊಂಡು ಬಂದು ಏಕಾಏಕಿ ನೇಹಾಳಿಗೆ ಮನಬಂದತೆ ಚಾಕುವಿನಿಂದ 9 ಬಾರಿ ಇರಿದಿದ್ದಾನೆ. ಇದರ ಪರಿಣಾಮ ತೀವ್ರ ರಕ್ತಸ್ರಾವ ಆಗಿದ್ದರಿಂದ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ನೇಹಾ ಮೃತ ಪಟ್ಟಿದ್ದಾಳೆ. ಘಟನೆ ತಿಳಿದ ಪೊಲೀಸರು ತಕ್ಷಣ ಅಲರ್ಟ್ ಆಗಿದ್ದು, ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಪುತ್ರಿ ನೇಹಾ ಹತ್ಯೆ ಪ್ರಕರಣ ಸಂಬಂಧ ಆರೋಪಿ ಫಯಾಜ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ನೇಹಾ ಹಿನ್ನಲೆ; ಕಾರ್ಪೋರೇಟರ್ ಪುತ್ರಿ ನೇಹಾ ಹಿರೇಮಠ ಕೆಎಲ್‌ಇ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದಳು. ಬೆಳಗಾವಿ ಜಿಲ್ಲೆಯ ಸವದತ್ತಿಯ ಮೂಲದ ಆರೋಪಿ ಫಯಾಜ್
ಅದೇ ಕಾಲೇಜಿನ ಹಳೇ ವಿದ್ಯಾರ್ಥಿ. ಇಬ್ಬರು ಬಿಸಿಎ ಓದುವಾಗ ಸಹಪಾಠಿಗಳಾಗಿದ್ದರಂತೆ. ಈತ ಬಿಸಿಎನಲ್ಲಿ ಅನುತ್ತೀರ್ಣನಾಗಿದ್ದನಂತೆ. ಆದರೆ ನೇಹಾ ಉತ್ತೀರ್ಣಳಾಗಿ ಎಂಸಿಎ ಮಾಡುತ್ತಿದ್ದಳು.
ನೇಹಾಳನ್ನು ಪ್ರೀತಿ ಮಾಡುವಂತೆ ಪ್ರೇರೆಪಿಸುತ್ತಿದ್ದನಂತೆ.ಆದರೆ ನೇಹಾ ನಾವು ಇಬ್ಬರು ಸ್ನೇಹಿತರಾಗಿ ಇರೋಣ ಎಂದು ಹೇಳಿ ಆರೋಪಿ ಫಯಾಜ್ ನಿಂದ ಅಂತರವನ್ನು ಕಾಯ್ದುಕೊಂಡು ಇದ್ದಳು ಪ್ರೀತಿ ನಿರಾಕರಿಸಿದಕ್ಕೆ ಕೋಪಗೊಂಡ ಫಯಾಜ್ ನೇಹಾಳನ್ನು ಹತ್ಯೆ ಮಾಡಲು ಮುಂದಾಗಿದ್ದಾನೆ ಎನ್ನಲಾಗಿದೆ.
ನೇಹಾ ಹತ್ಯೆ ಖಂಡಿಸಿ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಮಾತ್ರವಲ್ಲದೇ ದಲಿತ ಸಂಘಟನೆಗಳು, ಮುಸ್ಲಿಂ ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸಿ ನೇಹಾ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ.