Tuesday, July 21, 2026
Homeಕ್ರೈಮ್Car Accident: ಆಟವಾಡುತ್ತಾ ರಸ್ತೆಗೆ ಬಂದ ಮಗುವಿಗೆ ಒಮ್ಮೆಲೆ ಕಾರು ಡಿಕ್ಕಿಯಾಗಿ ದುರ್ಮರಣ

Car Accident: ಆಟವಾಡುತ್ತಾ ರಸ್ತೆಗೆ ಬಂದ ಮಗುವಿಗೆ ಒಮ್ಮೆಲೆ ಕಾರು ಡಿಕ್ಕಿಯಾಗಿ ದುರ್ಮರಣ

Telegram Group
Join Now

ಶಿವಮೊಗ್ಗ: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕ ಒಮ್ಮೆಲೆ ರಸ್ತೆಗೆ ಬಂದಿದ್ದು, ಈ ವೇಳೆ ಕಾರು ಡಿಕ್ಕಿಯಾಗಿ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕಿನ ಗುಂಡುಗದ್ದೆಯಲ್ಲಿ ನಡೆದಿದೆ.

ಗುಂಡುಗದ್ದೆ ಗ್ರಾಮದ ನಿವಾಸಿ ಪ್ರಗತ್.ಕೆ.ಆರ್ ಮತ್ತು ರಂಜನಾ ದಂಪತಿ ಪುತ್ರ ಋಷ್ಯ.ಪಿ (7) ಮೃತಪಟ್ಟ ಬಾಲಕ. ಮನೆಯ ಬಳಿ ಮಧ್ಯಾಹ್ನದ ವೇಳೆಗೆ ಆಟವಾಡುತ್ತಿದ್ದ ಬಾಲಕ, ಒಮ್ಮೆಲೆ ರಸ್ತೆಗೆ ಬಂದಿದ್ದಾನೆ. ಈ ವೇಳೆ ಕಾರು ಡಿಕ್ಕಿಯಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ತಕ್ಷಣವೇ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಕರೆತರಲಾಗಿತ್ತು. ತಲೆಗೆ ಗಂಭೀರ ಗಾಯವಾಗಿದ್ದರಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments