Tuesday, July 21, 2026
Homeಜಿಲ್ಲಾಸುದ್ದಿಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ

Telegram Group
Join Now

ಹಾಸನ: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಮಣ್ಣಲ್ಲಿ ಮಣ್ಣಾಗಿದ್ದಾರೆ. ಗೌಡರ ಹುಟ್ಟೂರು ಹರದನಹಳ್ಳಿ ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.

ಹಿರಿಯ ಪುತ್ರ ಹೆಚ್‌.ಡಿ ರಮೇಶ್ ಅವರಿಂದ ಅಂತ್ಯಕ್ರಿಯೆ ಕಾರ್ಯವಿಧಾನ ನೆರವೇರಿತು. ಗುಂಡಿಯಲ್ಲಿ ಗಂಗಾಜಲ ಸಿಂಪಡಿಸಿ ಶುದ್ಧೀಕರಣ ನೆರವೇರಿಸಿದ ಬಳಿಕ ಪಲ್ಲಕ್ಕಿಯಲ್ಲಿ ಹೊತ್ತುತಂದ ಪಾರ್ಥಿವ ಶರೀರವನ್ನ ಇಳಿಸಿ, ಅಂತ್ಯಕ್ರಿಯೆ ಮಾಡಲಾಯಿತು.

ಇದಕ್ಕೂ ಮುನ್ನ ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ, ಹೆಚ್‌.ಡಿ ಕುಮಾರಸ್ವಾಮಿ, ವಿ. ಸೋಮಣ್ಣ, ಶಿವರಾಜ್‌ ಸಿಂಗ್‌ ಚೌಹಾಣ್‌, ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ, ಸಿಎಂ ಡಿಕೆ ಶಿವಕುಮಾರ್‌, ಸಭಾಪತಿ ಬಸವರಾಜ ಹೊರಟ್ಟಿ, ಇಂಧನ ಸಚಿವ ಕೆ.ಜೆ ಜಾರ್ಜ್‌, ಆಹಾರ ಸಚಿವ ಕೆ.ಹೆಚ್‌ ಮುನಿಯಪ್ಪ, ಶಾಸಕರಾದ ಬಿ.ವೈ ವಿಜಯೇಂದ್ರ, ಬಿ.ವೈ ರಾಘವೇಂದ್ರ, ಡಾ. ನಿರ್ಮಲಾನಂದ ಸ್ವಾಮೀಜಿ, ನಂಜಾವಧೂತ ಶ್ರೀ, ರಂಭಾಪುರಿ ಶ್ರೀ ಸೇರಿದಂತೆ ಹಿರಿಯ ಹಾಗೂ ಕಿರಿಯ ಶಾಸಕರು, ಸಂಸದರು, ಪರಿಷತ್‌ನ ಸದಸ್ಯರು ಇತರ ಗಣ್ಯರಿಂದ ಅಂತಿಮ ಪುಷ್ಪನಮನ ಸಲ್ಲಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments